Friday, September 20, 2024

ಪ್ರಾಯೋಗಿಕ ಆವೃತ್ತಿ

ಚಂದ್ರಯಾನ–3ಗೆ ದುಡಿದ ವಿಜ್ಞಾನಿಗಳಿಗೆ 17 ತಿಂಗಳಿನಿಂದ ವೇತನ ನೀಡಿಲ್ಲ- ಕಾಂಗ್ರೆಸ್ ಆರೋಪ

ಚಂದ್ರಯಾನ–3ರ ಯಶಸ್ಸಿಗೆ ದುಡಿದ ವಿಜ್ಞಾನಿಗಳಿಗೆ  ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಈ ಕುರಿತು ‍X(ಟ್ವಿಟರ್) ನಲ್ಲಿ ಬರೆದುಕೊಂಡಿದ್ದು, ರಾಂಚಿ ಮೂಲದ ಹಿಂದೂಸ್ತಾನ್ ಎಂಜಿನಿಯರಿಂಗ್ ಕಾರ್ಪೊರೇಷನ್ (ಎಚ್‌ಇಸಿ) ಚಂದ್ರಯಾನ–3ರ ಉಡ್ಡಯನ ವಾಹನ ತಯಾರಿಸಿದ್ದು, ಇದರ ಎಂಜಿನಿಯರ್‌ಗಳಿಗೆ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

“>

ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಮುಂದಾಳತ್ವದಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದೇವೆ. ಸೋಮನಾಥ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ. ಆದರೆ ಕಪಟತನ ತೋರಿರುವ ಬಗ್ಗೆ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಲ್ಯಾಂಡಿಂಗ್ ನಂತರ ನೀವು ಪರದೆಯ ಮೇಲೆ ತ್ವರಿತವಾಗಿ ಬಂದು ಕ್ರೆಡಿಟ್ ತೆಗೆದುಕೊಂಡಿದ್ದೀರಿ, ಆದರೆ ವಿಜ್ಞಾನಿಗಳು ಮತ್ತು ಇಸ್ರೋವನ್ನು ಬೆಂಬಲಿಸುವಲ್ಲಿ ನಿಮ್ಮ ಸರ್ಕಾರವು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಚಂದ್ರಯಾನ 3ರಲ್ಲಿ ಕೆಲಸ ಮಾಡಿದ HEC ಇಂಜಿನಿಯರ್‌ಗಳು ಕಳೆದ 17 ತಿಂಗಳಿನಿಂದ ಸಂಬಳವನ್ನು ಏಕೆ ಸ್ವೀಕರಿಸಲಿಲ್ಲ ಎಂದು ವೇಣುಗೋಪಾಲ್ ಪ್ರಶ್ನಿಸಿದ್ದಾರೆ.

ಚಂದ್ರಯಾನ–3ರ ಬಜೆಟ್‌ನ್ನು ಶೇ. 32ರಷ್ಟು ಕಡಿತಗೊಳಿಸಿದ್ದೇಕೆ ಎಂದು ಪ್ರಶ್ನಿಸಿರುವ ಅವರು, ಇವರೆಲ್ಲಾ ದೇಶದ ಹೀರೋಗಳು. ಅವರು ವಿಶ್ವದರ್ಜೆಯ ಬಾಹ್ಯಾಕಾಶ ಯೋಜನೆಯನ್ನು ಮಾಡಿದ್ದಾರೆ. ಆದರೆ ಅವರ ಪ್ರತಿಭೆ ಮತ್ತು ಶ್ರಮದ ಬಗ್ಗೆ ನಿಮಗೆ ಯಾವುದೇ ಗೌರವವಿಲ್ಲ ಎಂದು ಪ್ರಧಾನಿ ಮೋದಿಯವರನ್ನು ವೇಣುಗೋಪಲ್ ಪ್ರಶ್ನಿಸಿದ್ದಾರೆ.

ಇದಲ್ಲದೆ ನಿನ್ನೆ ಇಸ್ರೋ ವಿಜ್ಞಾನಿಗಳು 17 ತಿಂಗಳಿನಿಂದ ತಮ್ಮ ಸಂಬಳವನ್ನು ಪಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರೋಪಿಸಿದ್ದರು. ಇಸ್ರೋ ವಿಜ್ಞಾನಿಗಳ ವೇತನದ ಬಗ್ಗೆ  ಪ್ರಧಾನಿ ಗಮನಿಸಬೇಕು ಎಂದು ಹೇಳಿದ್ದಾರೆ.

Related Articles

1 COMMENT

  1. This is the way how our Heroes are treated. If its the fact , its really a shame to us. When sucess comes every one want to grab the credit. How sad . But this scenario is very common in our so called great supper power nation. I can’ t understand when our people will learn the simple truth.😠😠😠😠😩😩😩😩😱😱😱

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!