Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಷ್ಟ್ರಸೇವೆ-ಪರಿಸರ ಪ್ರೇಮ ಉತ್ತೇಜಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ : ಶಬಾನಾ

ಪ್ರಪಂಚದ ಬಹುತೇಕ ರಾಷ್ಟ್ರಗಳಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಅಸ್ತಿತ್ವದಲ್ಲಿದೆ, ಸ್ವಯಂ ಶಿಸ್ತು, ರಾಷ್ಟ್ರ ಸೇವೆ, ಪರಿಸರ ಪ್ರೇಮವನ್ನು ಉತ್ತೇಜಿಸಲು ಸ್ಕೌಟ್ಸ್ ಅಂಡ್ ಗೈಡ್ಸ್ ಸಹಾಯಕ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತುದಾರರಾದ ಶಬಾನ ತಿಳಿಸಿದರು.

ಮಂಡ್ಯ ನಗರದ ಮೌಲಾನ ಆಜಾದ್ ಮಾದರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ರೂಢಿಸುವಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ನ ಪಾತ್ರ ಮಹತ್ತರವಾದುದು. ಚಿಕ್ಕ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳಲ್ಲಿ ಸ್ವಯಂ ಶಿಸ್ತು ಬೆಳೆಯುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕವಾಗಿದೆ. ಇಲ್ಲಿ ಸೇರಿದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹೆಚ್ಚಾಗಿರುತ್ತದೆ. ಕೊರೋನ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ನಿಂತು ಹೋಗಿದ್ದ ಚಟುವಟಿಕೆಗಳು ಈ ಶೈಕ್ಷಣಿಕ ವರ್ಷದಲ್ಲಿ ಆರಂಭವಾಗಿರುವುದು ಸಂತಸ ತಂದಿದೆ. ಸ್ವಯಂ ಸ್ಫೂರ್ತಿಯಿಂದ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಂಡು ಮುನ್ನಡೆಯ ಬೇಕೆಂದು ಕರೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆಸೀಫಾ ಬಶೀರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮುಖ್ಯ ಆಯುಕ್ತ ಟಿ.ವರಪ್ರಸಾದ್, ಶಾಲೆಯ ಮುಖ್ಯೋಪಾಧ್ಯಾಯ ಸಿ‌.ಎಚ್.ಮಧುಕುಮಾರ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!