Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಾತಿಗಣತಿ ವರದಿ ಸ್ವೀಕರಿಸಲು ಆಗ್ರಹಿಸಿ SDPI ಧರಣಿ

ರಾಜ್ಯದ ಜನಸಂಖ್ಯೆ ಜಾತಿವಾರು ಗಣತಿ ಮಾಡಿರುವ ಕಾಂತರಾಜ್ ಆಯೋಗದ ವರದಿ ಸ್ವೀಕರಿಸಿ, ಮುಸ್ಲಿಂ ಸಮುದಾಯದ 2 ಬಿ ಮೀಸಲಾತಿ ಪ್ರಮಾಣವನ್ನು ಶೇ 8 ಕ್ಕೆ ಹೆಚ್ಚಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ಕಾರ್ಯಕರ್ತರು ಮಂಡ್ಯದಲ್ಲಿ ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಧರಣಿ ನಡೆಸಿದ ಪಕ್ಷದ ಕಾರ್ಯಕರ್ತರು,  2015 ರಲ್ಲಿ ರಾಜ್ಯದಲ್ಲಿ 1.3 ಕೋಟಿ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಮಾಡಲಾಗಿದೆ, ಆದರೆ ಇದರ ಸಮೀಕ್ಷೆ ನಡೆಸಿದ ಕಾಂಗ್ರೆಸ್ ಸರ್ಕಾರ ವರದಿಯನ್ನು ಸ್ವೀಕಾರ ಮಾಡಲಿಲ್ಲ, ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವುದರಿಂದ ವರದಿ ಸ್ವೀಕರಿಸಿ, ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಮೂಲಕ ವಿಶ್ವಾಸಾರ್ಹ ದತ್ತಾಂಶ ಆಧರಿತ ಮಾಹಿತಿಯನ್ನು ಮೂರು ಹಂತದ ಪರಿಶೀಲನೆಗೆ ಒಳಪಡಿಸಿ, ಪ್ರತ್ಯೇಕ ರಾಜಕೀಯ ಮೀಸಲಾತಿ ರೂಪಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ 2010 ರಲ್ಲಿ ರಾಜ್ಯಗಳಿಗೆ ಆದೇಶ ನೀಡಿದೆ, ಹಾಗಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾಂತರಾಜ್ ವರದಿ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಕಳೆದ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿತ್ತು, ಸುಪ್ರೀಂ ಕೋರ್ಟ್ ಹಿಂದುಳಿದವರ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈ ಬಿಟ್ಟಿರುವುದು ಸಂವಿಧಾನ ಬಾಹಿರ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಂತಿಮ ವರದಿ ಕಾಯದೇ ಮಧ್ಯಂತರ ವರದಿ ಆಧಾರದಲ್ಲಿ ಮೀಸಲಾತಿ ಹಿಂಪಡೆಯುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿದೆ. ಹಾಗಾಗಿ ಮುಸ್ಲಿಂ ಸಮುದಾಯದ 2 ಬಿ ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಸಾದತ್ ಪಾಷಾ, ಉಪಾಧ್ಯಕ್ಷ ಮುಬಾರಕ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮದ್, ಅಜ್ಗರ್ ಅಹಮದ್, ಫಾರೂಕ್ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ