ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಭಾಗವಹಿಸಿ ಬೆಂಬಲ ನೀಡಿದರು.
ಎಸ್‌ಡಿಪಿಐ ಅಧ್ಯಕ್ಷ ಸಾದತ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಹಲವು ಕಾರ್ಯಕರ್ತರು ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಡಿಪಿಐ ಉಪಾಧ್ಯಕ್ಷ ಮುಕ್ತಾರ್ ಅಹಮದ್, ಇಂದು ಪವಿತ್ರ ಹಬ್ಬ ಈದ್ ಮಿಲಾದ್ ಇದೆ. ಆದರೆ ಕಾವೇರಿ ನೀರಿನ ವಿಚಾರದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿರುವಾಗ ನಾವು ಹಬ್ಬ ಮಾಡುತ್ತಾ ಕೂರಲು ಆಗುತ್ತದೆಯೇ?ನಮಗೆ ಹಬ್ಬಕ್ಕಿಂತ ಕಾವೇರಿ ನೀರೇ ಬಹಳ ಮುಖ್ಯ ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಬಂದ್ ಮಾಡಬೇಕು ಎಂದರು.
ನಾಳೆ ನಡೆಯಲಿರುವ ಕರ್ನಾಟಕ ಬಂದ್ ಗೆ ನಮ್ಮ ಸಂಘಟನೆ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಬಂದ್ ಯಶಸ್ವಿಯಾಗಲು ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರಾದ ಮುಬಾರಕ್ ಹುಸೇನ್ ಅಜ್ಗರ್ ಸೇರಿದಂತೆ ಹಲವರಿದ್ದರು.




