Thursday, September 19, 2024

ಪ್ರಾಯೋಗಿಕ ಆವೃತ್ತಿ

ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಮಾರ್ಚ್ 9, 2023 ರಿಂದ ಮಾ.29, 2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು (ನವೆಂಬರ್​ 28) ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

“>

ಪರೀಕ್ಷಾ ದಿನಾಂಕ ವಿಷಯ
09-03-2023 ಕನ್ನಡ, ಅರೇಬಿಕ್
11-03-2023 ಗಣಿತ, ಶಿಕ್ಷಣ ಶಾಸ್ತ್ರ
13-03-2023 ಅರ್ಥಶಾಸ್ತ್ರ
14-03-2023 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ
15-03-2023 ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್​
16-03-2023 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023 ಮಾಹಿತಿ ತಂತ್ರಜ್ಞಾನ, ರೀಟೈಲ್​​, ಆಟೋಮೊಬೈಲ್​, ಹೆಲ್ತಕೇರ್​, ಬ್ಯೂಟಿ ಆಂಡ್​ ವೆಲ್​ನೆಸ್​
18-03-2023 ಭೂಗೋಳಶಾಸ್ತ್ರ, ಜೀವಶಾಸ್ತ್ರ
20-03-2023 ಇತಿಹಾಸ, ಭೌತಶಾಸತ್ರ
21-03-2023 ಹಿಂದಿ
23-03-2023 ಇಂಗ್ಲೀಷ್​
25-03-2023 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ಶಾಸ್ತ್ರ
29-03-2023 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!