Friday, November 20, 2026

ಪ್ರಾಯೋಗಿಕ ಆವೃತ್ತಿ

ದ್ವಿತೀಯ ಪಿಯು ಫಲಿತಾಂಶ ಉತ್ತಮಗೊಳಿಸಲು ಶ್ರಮಿಸಿ : ಜಿಲ್ಲಾಧಿಕಾರಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿ ಜಿಲ್ಲೆಗೆ ಉತ್ತಮ ಸ್ಥಾನ ದೊರಕುವಂತೆ ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಎಂದು ಜಿಲ್ಲಾಧಿಕಾರಿ ಹೆಚ್.ಎನ್ ಗೋಪಾಲಕೃಷ್ಣ ತಿಳಿಸಿದರು.

ಮಂಗಳವಾರ ಮಂಡ್ಯ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ  ಪಿ.ಯು ಕಾಲೇಜಿನ ಪ್ರಾಂಶುಪಾಲರ ಸಭೆಯನ್ನು ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನಡೆಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿಯ  ವಾರ್ಷಿಕ ಫಲಿತಾಂಶವು ಹಿಂದಿನ ವರ್ಷ ಶೇ.59ರಷ್ಟಿತ್ತು. ಆದರೆ ಈ ವರ್ಷ ಇನ್ನೂ ಹೆಚ್ಚಿನ ಫಲಿತಾಂಶ ಜಿಲ್ಲೆಗೆ ಬರಲಿ. ಫಲಿತಾಂಶವನ್ನು ಉತ್ತಮಪಡಿಸಲು  ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶೇಷ ತರಗತಿಗಳು, ಗುಂಪು ಅಧ್ಯಯನ, ಕಡಿಮೆ ಅಂಕ ಪಡೆದಿರುವ ಮಕ್ಕಳಿಗೆ  ಪುನರಾವರ್ತನೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವುದು ಹೀಗೆ ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ ಸಲಹೆ ನೀಡಿದರು.

ಜಿಲ್ಲೆಯ ಫಲಿತಾಂಶವನ್ನು ಉತ್ತಮಪಡಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಸಹಕಾರದೊಂದಿಗೆ ಕೆಲಸ ನಿರ್ವಹಿಸಿ ಎಂದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಾಂತಾ ಎಲ್ ಹುಲ್ಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್ ಉಮೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ