ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 3 ವಿಷಯಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೊಬ್ಬಳು ಮನನೊಂದು ನೇಣಿಗೆ ಶರಣಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ.
ಮಹದೇವಪುರ ಗ್ರಾಮದ ಜಗದೀಶ್ ಎಂಬುವರ ಪುತ್ರಿ ಸ್ಪಂದನ ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದು, ಮಂಡ್ಯದ ಸಾಂತೋಂ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಕಾರಣ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾಳೆ.
ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.