Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪಿಎಲ್‌ಡಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಸರಸ್ವತಿ ಶೇಖರ್ ಆಯ್ಕೆ

ಮಂಡ್ಯ ತಾಲ್ಲೂಕಿನ ಪಿಎಲ್‌ಡಿ ಬ್ಯಾಂಕ್‌ ನ ಉಪಾಧ್ಯಕ್ಷ ರಾಗಿ ಬೇಲೂರು ಗ್ರಾಮದ ಸರಸ್ವತಿ
ಕೆ.ಶೇಖರ್ ಅವರು ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಉಪಾಧ್ಯಕ್ಷರಾದ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ 15 ಮಂದಿ ನಿರ್ದೇಶಕರಿರುವ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಸರಸ್ವತಿ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿಯಾದ ಸಹಕಾರ ಇಲಾಖೆಯ ಮಾರಾಟ ಅಧಿಕಾರಿ ತ್ಯಾಗರಾಜ ಪ್ರಸಾದ್ ಅವರು ಸರಸ್ವತಿ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನಂತರ ಮಾತನಾಡಿದ ಸರಸ್ವತಿ, ಪಿಎಲ್‌ಡಿ ಬ್ಯಾಂಕ್‌ ನ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಸೇರಿ ನನ್ನನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.ಮುಂದಿನ ದಿನಗಳಲ್ಲಿ ಎಲ್ಲರ ಮಾರ್ಗದರ್ಶನದಲ್ಲಿ ಬ್ಯಾಂಕಿನ ಅಭಿವೃದ್ಧಿ ಕೆಲಸಗಳಿಗೆ ಎಲ್ಲರ ಜೊತೆ ಸೇರಿ ಕೆಲಸ ಮಾಡುತ್ತೇನೆ ಎಂದರು.

ಪಿಎಲ್‌ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಬೇಲೂರು ಸೋಮಶೇಖರ್ ಮಾತನಾಡಿ ಎಲ್ಲಾ ನಿರ್ದೇಶಕರು ಒಟ್ಟಿಗೆ ಸೇರಿ ಸರಸ್ವತಿ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಬ್ಯಾಂಕಿನ ಅಭಿವೃದ್ಧಿಗೆ ಅಧ್ಯಕ್ಷರು ಹಾಗೂ ನಿರ್ದೇಶಕರ ಜೊತೆ ಕೈಜೋಡಿಸಿ ಅವರು ಹಗಲಿರುಳು ಶ್ರಮಿಸಲಿ ಎಂದು ಶುಭ ಹಾರೈಸಿದರು.

ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಹೆಚ್.ಸಿ.ಶಿವಲಿಂಗೇಗೌಡ ಹೊಸಹಳ್ಳಿ ಮಾತನಾಡಿ ಸರಸ್ವತಿ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಬ್ಯಾಂಕಿನ ಆಡಳಿತ ಮಂಡಳಿಯ ಪರವಾಗಿ ಅವರಿಗೆ ಅಭಿನಂದನೆ ಯನ್ನು ಸಲ್ಲಿಸುತ್ತಾ ಸರಸ್ವತಿ ಅವರು ಬ್ಯಾಂಕಿನ ಅಭಿವೃದ್ಧಿಗೆ ಸಹಕಾರ ಕೊಡಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕರಾದ ಪ್ರಕಾಶ್‌ ಎಂ, ಬಿ.ಎಲ್. ಬೋರೇಗೌಡ, ಟಿ.ಬಿ. ಶಿವಲಿಂಗೇಗೌಡ,ಸುನಂದಮ್ಮ ಸಿದ್ದರಾಮು, ಸಿ.ಎ.ಅರವಿಂದ್, ಮರೀಗೌಡ,ಎಂ.ಯೋಗೇಶ್,
ಬಿ.ಕೆ.ರಾಮೇಗೌಡ, ಚಿಕ್ಕಬೆಟ್ಟಯ್ಯ, ಜಿ.ಸವಿತಾ ಶಂಕರ್, ನಂಜುಂಡ ಶಿವಾರ, ಎಂ.ಸಿ. ಕೃಷ್ಣೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ