Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲಾ ಉತ್ತಮ ಶಿಕ್ಷಕರ ಆಯ್ಕೆ ಸಮಿತಿ ಸಭೆ

ಮಂಡ್ಯ ತಾಲೂಕು ದಕ್ಷಿಣ ವಲಯದಿಂದ ಜಿಲ್ಲಾ ಉತ್ತಮ ಶಿಕ್ಷಕರ ಆಯ್ಕೆಗೊಳಿಸುವ ಸಂಬಂಧ ಸಮಿತಿಯ ಸದಸ್ಯರ ಸಭೆ ಮಂಡ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಆಯ್ಕೆ ಸಮಿತಿ ಅಧ್ಯಕ್ಷ ಮಂಡ್ಯ ತಾ. ದಕ್ಷಿಣ ವಲಯ ಕ್ಷೇತ್ರಶಿಕ್ಷಣಾಧಿಕಾರಿ ಮಹದೇವ್ ವಹಿಸಿದ್ದರು.

ಸಮಿತಿಯ ಸದಸ್ಯರಾಗಿ ಕ್ಷೇತ್ರ ಸಮನ್ವಯಾಧಿಕಾರಿ ಉಮೇಶ್, ಮಂಡ್ಯ ತಾ. ದಕ್ಷಿಣ ವಲಯದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣಮಂಗಲ, ಡಯಟ್ ಹಿರಿಯ ಉಪನ್ಯಾಸಕರಾದ ತೆಹರಾ ಮೇಡಂ, ಉಪ ಪ್ರಾಂಶುಪಾಲರಾದ ಲೋಕೇಶ್, ನಿವೃತ್ತ ಹಿರಿಯ ಶಿಕ್ಷಕರಾದ ಗುರುಲಿಂಗಯ್ಯ, ಅಜೀಂ ಪ್ರೇಮ್ ಜೀ ಪೌಂಡೇಶನ್ ನ ಶಿವಶಂಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ನಂದೀಶ್, ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನಾಗರಾಜ್, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಸ್ವಾಮಿ ಹಾಗೂ ಮಧುಸೂದನ್ ಸಭೆಯಲ್ಲಿ ಭಾಗವಹಿಸಿದ್ದರು..

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ