Thursday, November 19, 2026

ಪ್ರಾಯೋಗಿಕ ಆವೃತ್ತಿ

ಸ್ವಾಭಿಮಾನಿ ಸಮಾವೇಶಕ್ಕೆ ಮಂಡ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ; ರಾಮಚಂದ್ರಪ್ಪ

ಡಿ.5ರಂದು ಹಾಸನದಲ್ಲಿ ಬೃಹತ್ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು ಈ ಸಮಾವೇಶಕ್ಕೆ ಜಿಲ್ಲೆಯ ಪ್ರತಿ ಹಳ್ಳಿಯಿಂದ ಕಾರ್ಯಕರ್ತರು, ಅಭಿಮಾನಿಗಳು, ಶೋಷಿತ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮಂಡ್ಯ ಜಿಲ್ಲೆ ವತಿಯಿಂದ ನಗರದ ಕನಕ ಸಮುದಾಯ ಭವನದಲ್ಲಿ ನೆಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಬೆಂಬಲಿಸಿ, “ಸ್ವಾಭಿಮಾನಿ” ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಕ್ತಿ ಪ್ರದರ್ಶನ ತೋರಿಸಬೇಕಾಗಿದೆ

ಹಾಸನದಲ್ಲಿ ನಡೆಯುತ್ತಿರುವುದು ಮೊದಲನೇ ಸ್ವಾಭಿಮಾನಿ ಸಮಾವೇಶ ಇನ್ನು ರಾಜ್ಯದ ಮೂರು ವಿಭಾಗಗಳಲ್ಲೂ ಸ್ವಾಭಿಮಾನಿ ಸಮಾವೇಶ ನಡೆಯುತ್ತದೆ ಎಂದು ಹೇಳಿದರು

ಸ್ವಾಭಿಮಾನಿ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯ ಗಳಿಗೆ ಒಳ್ಳೆಯದನ್ನು ಮಾಡಿ, ಬಡವರ ಜೀವನ ಮಟ್ಟ ಸುಧಾರಿಸುವ ಉದ್ದೇಶ ಇಟ್ಟುಕೊಂಡು ರಾಜಕೀಯ ಆಳುತ್ತಿರುವ ಮುಖ್ಯಮಂತ್ರಿಗಳ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಅವರ ಶಕ್ತಿ ಕುಂದಿಸಲು ವಿರೋಧ ಪಕ್ಷಗಳು ಹೊರಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೆ ನಾವುಗಳು ಇದ್ದೇವೆ ಎಂದು ಹಾಸನದಲ್ಲಿ ಶೋಷಿತ ಸಮುದಾಯಗಳು ತಮ್ಮ ಶಕ್ತಿ ಪ್ರದರ್ಶನ ತೋರಿಸಬೇಕಾಗಿದೆ ಎಂದು ಹೇಳಿದರು.

ಶೋಷಿತ ಸಮುದಾಯಗಳು ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ

ಶೋಷಿತ ಸಮುದಾಯಗಳ ರಕ್ಷಣೆಗೆ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿದ್ದಾರೆ. ಹಿಂದುಳಿದ ವರ್ಗಗಳ ಜಾತಿಗಳಿಗೂ ಸಹ ಗುತ್ತಿಗೆಯಲ್ಲಿ ಶೇ.18ರಷ್ಟು ಮೀಸಲಾತಿ ಕೊಟ್ಟಿರುವ ಹಾಗೂ ಬಡವರ ಪರ ಅನೇಕ ಕಾರ್ಯಕ್ರಮಗಳನ್ನು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಷಿತ ಸಮುದಾಯಗಳು ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.

ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಅನಂತ ನಾಯ್ಕ ಮಾತನಾಡಿ ಬಿಜೆಪಿ ಪಕ್ಷ ಜೊತೆ ಸೇರಿ ಜೆಡಿಎಸ್ ಕಾಂಗ್ರೆಸ್ ಪಕ್ಷ ತೆಗೆಯುವುದೇ ನಮ್ಮ ಗುರಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳುತ್ತಿದ್ದಾರೆ.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆಯುವುದಕ್ಕೆ ನಮ್ಮ ಪಕ್ಷ ಮರಳಿನ ಮನೆಯಲ್ಲ,139 ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆ ಯಾಗಿದ್ದು ರಾಜ್ಯದ ಜನರು ಸಿದ್ದರಾಮಯ್ಯ ಅವರ ಪರ ಇದೆ ಎಂಬ ಸಂದೇಶ ಕೊಟ್ಟಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜನಪರ ರಾಜಕಾರಣ ಮಾಡುವ ತಿಳುವಳಿಕೆ ಹಾಗೂ ಬದ್ಧತೆ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಸಹ ಕಾಪಿ ಮಾಡುತ್ತಿದ್ದಾರೆ.ಆದ್ದರಿಂದ ಸ್ವಾಭಿಮಾನಿ ಸಮಾವೇಶದ ಜೊತೆ ಸಂವಿಧಾನ ರಕ್ಷಣೆ ಮಾಡಬೇಕಾಗಿದೆ ಎಂದು ಹೇಳಿದರು.

ಸಮಾವೇಶ ಯಶಸ್ವಿ

ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಗದಾಪ್ರಹಾರ ಮಾಡುತ್ತಿರುವುದಕ್ಕೆ ಹಾಸನದಲ್ಲಿ ಡಿಸೆಂಬರ್ 5ರಂದು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ಸ್ವಾಭಿಮಾನಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ, ಮುಡಾ ಹಗರಣ ಮಾಡುವವರು ರಸ್ತೆಯಲ್ಲಿದ್ದಾರೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರದು ಎಳ್ಳಷ್ಟು ತಪ್ಪಿಲ್ಲ ಎಂದು ಹೇಳಿದರು.

ಘಟಾನುಘಟಿ ನಾಯಕರ ನಿರ್ದೇಶನದ ಮೇಲೆ 1400ಕ್ಕಿಂತ ಹೆಚ್ಚು ಸೈಟುಗಳು ಹಗರಣ ನಡೆದಿದ್ದು ಯಾರು ಮಾಡಿ, ಯಾರಿಗೆ ಹಂಚಿಕೆ ಮಾಡಿದ್ದಾರೆ ಎಂಬುವುದು ಕೂಡಲೇ ಹೊರಗಡೆ ಬರುತ್ತದೆ ಅಲ್ಲಿಯವರೆಗೂ ತಡೆಯಿರಿ ಎಂದು ವಿರೋಧ ಪಕ್ಷಗಳಿಗೆ ಚಾಟಿ ಬೀಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ, ಬೆಂಬಲಕ್ಕೆ ನಾವುಗಳು ಎಲ್ಲರೂ ನಿಲ್ಲಬೇಗಿದೆ. ನಮ್ಮ ಕುಟುಂಬ ಹಲವಾರು ಮುಖ್ಯಮಂತ್ರಿಗಳನ್ನು ನೋಡಿದೆ, ಸಿದ್ದರಾಮಯ್ಯ ಅವರ ಹತ್ತಿರ ಯಾವುದೇ ಜಾತಿ ಇಲ್ಲ ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ಕಾಣುತ್ತಾರೆ. ಅನಿವಾರ್ಯವಾಗಿ ನಮ್ಮ ಕುಟುಂಬ ಜೆಡಿಎಸ್ ಜೊತೆ ಹೋಗಬೇಕಾದ ಸಂದರ್ಭ ಬಂದಿತ್ತು. ನಾವುಗಳು ಜೆಡಿಎಸ್ ಬಿಟ್ಟು ಈಗ ಮತ್ತೆ ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಸಂಸ ಮುಖಂಡ ಮಾವಳ್ಳಿ ಶಂಕರ್,ಹಿಂದುಳಿದ ಜಾತಿಗಳ ಒಕ್ಕೂಟ ಮಂಡ್ಯ ಜಿಲ್ಲಾಧ್ಯಕ್ಷ ಕೆ.ಹೆಚ್.ನಾಗರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿ, ಮನ್ ಮುಲ್ ಕಾಂಗ್ರೆಸ್ ಅಭ್ಯರ್ಥಿ ಕೆಬ್ಬಳ್ಳಿ ರಾಜು, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್ ಸಂದೇಶ್, ನಗರಸಭೆ ಮಾಜಿ ಅಧ್ಯಕ್ಷ ವಿಜಯಲಕ್ಷ್ಮಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಿ ಲಿಂಗಯ್ಯ, ನಗರಸಭಾ ಸದಸ್ಯ ಶ್ರೀಧರ್, ಮೂಡ ಅಧ್ಯಕ್ಷ ನಹಿಮ್, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಮುಜಾಹಿದ್, ಕೆ.ಆರ್.ಪೇಟೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬಾಬು,ಜಬಿ, ಅಮ್ಜದ್ ಪಾಷ, ಎನ್. ದೊಡ್ಡಯ್ಯ, ಜಗದೀಶ್, ರಘು, ಸೇರಿದಂತೆ ಇತರರು ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ