Thursday, June 13, 2024

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಸಚಿವ ಕೃಷ್ಣ ಭೈರೇಗೌಡ; ತೆರಿಗೆ ವಂಚನೆ ಕುರಿತು ವಿಚಾರಗೋಷ್ಠಿ

ಕರ್ನಾಟಕ ರಾಜ್ಯ ರೈತಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ ಮತ್ತು ಜಾಗೃತ ಕರ್ನಾಟಕ ಸಂಘಟನೆಗಳ ಸಹಯೋಗದಲ್ಲಿ ಮಂಡ್ಯನಗರ ಕಲ್ಲಹಳ್ಳಿ ಸಮೀಪದ ಸುಮರವಿ ಕಲ್ಯಾಣ ಮಂಟಪದಲ್ಲಿ ಏ.13ರಂದು ಬೆಳಿಗ್ಗೆ 11 ಗಂಟೆಗೆ ‘ಕರ್ನಾಟಕಕ್ಕಾದ ತೆರಿಗೆ ಪಾಲಿನ ವಂಚನೆ ರೈತರ ಗಾಯದ ಮೇಲೆ ಬರೆ’ ವಿಚಾರಗೋಷ್ಠಿ ನಡೆಯಲಿದೆ.

ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ದಿಕ್ಸೂಚಿ ಭಾಷಣ ಮಾಡುವರು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರಧಾನ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ  ಕೃಷಿ ಸಚಿವ  ಎನ್.ಚಲುವರಾಯಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಸಿ.ಕುಮಾರಿ ಭಾಗವವಹಿಸುವರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸುವರು. ವಿಚಾರಗೋಷ್ಠಿಗೂ ಮುನ್ನವೇ ಬೆಳಿಗ್ಗೆ 10 ಗಂಟೆಗೆ ದೆಹಲಿ ರೈತ ಹೋರಾಟ ಕುರಿತ ಕೇಸರಿ ಹರವೂ ನಿರ್ದೇಶನದ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಮೊ. 8892323523, 9945302066, 9844103363 ಸಂಪರ್ಕಿಸಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!