Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ‘ಒಳ ಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ವಿಚಾರ ಸಂಕಿರಣ ಮುಂದೂಡಿಕೆ

ಅಖಿಲ ಕರ್ನಾಟಕ ಡಾ. ಬಾಬು ಜಗಜೀವನ್ ರಾಮ್ ಸಂಘಗಳ ಒಕ್ಕೂಟ, ಕರ್ನಾಟಕ ಮಾದರ ಮಹಾಸಭಾ ಜಿಲ್ಲಾ ಸಮಿತಿ ವತಿಯಿಂದ ಸೆ.20ರಂದು ಬೆಳಗ್ಗೆ 10.45ಕ್ಕೆ ಮಂಡ್ಯನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ‘ಒಳ ಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ಮಂಡ್ಯ ಜಿಲ್ಲಾಮಟ್ಟದ ವಿಚಾರ ಸಂಕಿರಣವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಸೆ.20ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ರಾಜ್ಯ ಮಾದಿಗರ ತುರ್ತುಸಭೆಯನ್ನು ಮಾಜಿ ಸಚಿವ ಹೆಚ್.ಆಂಜನೇಯ ನೇತೃತ್ವದಲ್ಲಿ ಹಮ್ಮಿಕೊಂಡಿರುವುದರಿಂದ, ಅದೇ ದಿನ ಮಂಡ್ಯದಲ್ಲಿ ನಡೆಯಬೇಕಿದ್ದ ವಿಚಾರ ಸಂಕಿರಣವನ್ನು ಮುಂದೂಡಲಾಗಿದೆ. ಹಾಗಾಗಿ ಸಮಾಜದ ಬಂಧುಗಳು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ವಿಚಾರ ಸಂಕಿರಣ ನಡೆಯುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಡಾ. ಬಾಬು ಜಗಜೀವನ್ ರಾಮ್ ಸಂಘಗಳ ಒಕ್ಕೂಟದ ಅಧ್ಯಕ್ಷ ಎನ್.ಆರ್. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ