Saturday, May 25, 2024

ಪ್ರಾಯೋಗಿಕ ಆವೃತ್ತಿ

ಡಾಕ್ಟರ್ ಆಗಿ ಜನರ ಸೇವೆ ಮಾಡುವೆ : ಕೆ.ಎಂ.ಗಗನ್

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯದ ಟಾಪರ್ ಗಳಲ್ಲಿ ಒಬ್ಬನಾಗಿರುವ ಮಳವಳ್ಳಿ ಪಟ್ಟಣದ ಅನಿತಾ ಪ್ರೌಢ ಶಾಲೆಯ ವಿದ್ಯಾರ್ಥಿ ಕೆ.ಎಂ.ಗಗನ್ ಡಾಕ್ಟರ್ ಆಗಿ ಜನರ ಸೇವೆ ಮಾಡುವ ಆಸೆ ಹೊಂದಿದ್ದಾನೆ.

ನುಡಿ ಕರ್ನಾಟಕ.ಕಾಮ್ ಜೊತೆ ಮಾತನಾಡಿದ ಕೆ.ಎಂ.ಗಗನ್, ನನ್ನ ತಂದೆ ತಂದೆ ಮಹದೇವು ಬೆಂಗಳೂರಿನಲ್ಲಿ ಬಟ್ಟೆ ಅಂಗಡಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಾರೆ.

ನಾನು ಮಳವಳ್ಳಿಯಿಂದ ಆರು ಕಿಲೋಮೀಟರ್ ದೂರದಲ್ಲಿರುವ ಅಜ್ಜಿಯ ಮನೆ ಕಲ್ಲಾರೆಪುರದಲ್ಲಿ ತಾಯಿಯೊಂದಿಗೆ ವಾಸವಿದ್ದೇನೆ. ದಿನನಿತ್ಯ 5 ರಿಂದ 6 ಗಂಟೆ ವ್ಯಾಸಂಗ ಮಾಡುತ್ತಿದ್ದೆ. ನಾನು ಯಾವುದೇ ಟ್ಯೂಷನ್ ಗೆ ಹೋಗುತ್ತಿರಲಿಲ್ಲ.

ಶಾಲೆಯಲ್ಲಿ ಗುರುಗಳು ಹೇಳಿಕೊಟ್ಟ ಪಾಠವನ್ನು ಅಂದೇ ಓದಿಕೊಳ್ಳುತ್ತಿದ್ದೆ. ನನ್ನ ಪೋಷಕರ ಆಸೆಯಂತೆ ವೈದ್ಯನಾಗಿ ಜನರ ಸೇವೆ ಮಾಡುವ ಗುರಿ ಹೊಂದಿದ್ದು, ಪ್ರಥಮ ಪಿಯುಸಿಗೆ ಪಿಸಿಎಂಬಿ ಆಯ್ಕೆ ಮಾಡಿಕೊಳ್ಳುವುದಾಗಿ ತಿಳಿಸಿದರು.

ನನ್ನ ಯಶಸ್ಸಿಗೆ ಕಾರಣರಾದ ಅಪ್ಪ ಅಮ್ಮ, ಶಿಕ್ಷಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!