Friday, September 20, 2024

ಪ್ರಾಯೋಗಿಕ ಆವೃತ್ತಿ

ವಿಧಾನಸಭೆಯ ಮೊದಲ ಅಧಿವೇಶನ ಶುರು ; ಬಿಜೆಪಿಗೆ ಇನ್ನೂ ಸಿಗದ ವಿಪಕ್ಷ ನಾಯಕ

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಸೋಮವಾರ (ಜುಲೈ 3) ಆರಂಭವಾಗಲಿದೆ. ಆದರೆ ಈವರೆಗೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯುದಲ್ಲಿ ಚುನಾವಣೆ ಮುಗಿದು ಎರಡು ತಿಂಗಳಾಗುತ್ತಿದ್ದರೂ ಇನ್ನೂ ಬಿಜೆಪಿ ಮಾತ್ರ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಂತಹದ್ದೊಂದು ಸ್ಥಿತಿ ಇತ್ತೀಚಿನ ವರ್ಷಗಳಲ್ಲಿ ಬಂದಿರಲಿಲ್ಲ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇರುವುದಿಲ್ಲ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ”ಸೋಮವಾರವೇ ಸರ್ವ ಸಮೃತವಾಗಿ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ” ಎಂದು ಹೇಳಿದ್ದಾರೆ.

ಇಷ್ಟು ದಿನಗಳು ಕಳೆದರೂ ಬಿಜೆಪಿಗೆ ವಿರೋಧ ನಾಯಕನ ಆಯ್ಕೆ ಮಾಡಲು ಸಾಧ್ಯವಾಗದಿರುವುದಕ್ಕೆ ಕಾಂಗ್ರೆಸ್ ದಿನನಿತ್ಯ ಕಾಲೆಳೆಯುತ್ತಲೇ ಇದೆ. ಆದರೂ ಬಿಜೆಪಿಯಲ್ಲಿನ ಗೊಂದಲ ಮಾತ್ರ ಪರಿಹಾರವಾಗಿಲ್ಲ.

ಆಡಳಿತ ಪಕ್ಷವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಸಜ್ಜು

10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ವಿಧಾನಸಭಾಧ್ಯಕ್ಷರಾಗಿರುವ ಯುಟಿ ಖಾದರ್ ಅವರು ಅಧಿವೇಶನದ ಬಗ್ಗೆ ಮಾತನಾಡಿದ್ದು, ”ಸ್ಪೀಕರ್ ಆಗಿ ನನಗೆ ಮೊದಲ ಅಧಿವೇಶನ ಬಹಳ ಆಸಕ್ತಿಯಿಂದ ಇದ್ದೇನೆ. ಪ್ರೀತಿ ಸೌಹಾರ್ದದಿಂದ ಅಧಿವೇಶನ ನಡೆಸಬೇಕು ಅಂದುಕೊಂಡಿದ್ದೇನೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ” ಎಂದರು.

ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಮೂಲಕ, ನೂತನ ಕಾಂಗ್ರೆಸ್‌ ಸರ್ಕಾರದ ಮೊದಲ ಅಧಿವೇಶನಕ್ಕೆ ಚಾಲನೆ ಸಿಗಲಿದೆ. ಹೊಸ ಸರ್ಕಾರದ ಮುನ್ನೋಟ, ಅಭಿವೃದ್ಧಿ ಯೋಜನೆಗಳ ಜೊತೆಗೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ವಾಗ್ದಾನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

ಜುಲೈ 1ರಿಂದ ಪ್ರಶೋತ್ತರ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸೇರಿದಂತೆ ಕಾರ್ಯಕಲಾಪಗಳು ನಡೆಯಲಿವ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡಿಸಲಿದ್ದಾರೆ. ಆಯವ್ಯಯದ ಗಾತ್ರ ಹೆಚ್ಚಾಗಲಿದೆ ಎಂಬ ಸುಳಿವನ್ನು ಈಗಾಗಲೇ ಮುಖ್ಯಮಂತ್ರಿ ನೀಡಿರುವುದರಿಂದ, ಈ ಬಜೆಟ್‌ನಲ್ಲಿ ಐದು ‘ಗ್ಯಾರಂಟಿ’ಗಳಿಗೆ ಆರ್ಥಿಕ ಸಂಪನ್ಮೂಲ ಒದಗಿಸುವ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆಯಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!