Thursday, September 19, 2024

ಪ್ರಾಯೋಗಿಕ ಆವೃತ್ತಿ

ಉತ್ತರ ಕನ್ನಡ| ಗುಡ್ಡ ಕುಸಿದು ಏಳು ಮಂದಿ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಈ ದುರ್ಘಟನೆ ನಡೆದಿದೆ.

ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ‌ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿರುವ ಪರಿಣಾಮ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾರಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬ ಐವರು ಸೇರಿದಂತೆ 7 ಮಂದಿ ಮಣ್ಣಿನಲ್ಲಿಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಮೃತಪಟ್ಟವರು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ (55) ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರೀ ಗುಡ್ಡ ಕುಸಿತವಾಗಿದ್ದು, ಈ ಪರಿಣಾಮ ಹೆದ್ದಾರಿ ಬಳಿಯ ಸಣ್ಣಪುಟ್ಟ ಅಂಗಡಿಗಳಿಗೆ ಹಾನಿಯಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!