Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಬಸ್ಸಿನಲ್ಲಿ ಕಿರುಕುಳ ನೀಡಿದ ಕಾಮುಕನಿಗೆ ಕಪಾಳ ಮೋಕ್ಷ ಮಾಡಿದ ಯುವತಿ – ವಿಡಿಯೋ ವೈರಲ್

ಕೆ.ಆರ್.ಪೇಟೆ ಪಟ್ಟಣದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿ, ಆಕೆಯನ್ನು ಸ್ಪರ್ಶಿಸಲು ಮುಂದಾದ ಕಾಮುಕನೊಬ್ಬನಿಗೆ ಯುವತಿಯೇ ಕತ್ತಿನ ಪಟ್ಟಿ ಹಿಡಿದು ಕೊಂಡು ಕಪಾಳ ಮೋಕ್ಷ ಮಾಡಿರುವ ಘಟನೆ ಶನಿವಾರ ಸಂಜೆ ನಡೆಸಿದೆ.

“>

ಯುವತಿಯು ಸ್ಥಳೀಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು, ಅಪರಿಚಿತ ವ್ಯಕ್ತಿ ಅವಳನ್ನು ಚುಡಾಯಿಸುತ್ತಿದ್ದ ಮತ್ತು ಅನುಚಿತವಾಗಿ ಸ್ಪರ್ಶಿಸಲು ಪ್ರಯತ್ನಿಸಿದ. ಆಕೆ ಎಚ್ಚರಿಸಿದ ನಂತರವೂ, ಅವನು ಆಕೆಯನ್ನು ಮುಟ್ಟುವುದನ್ನು ಮುಂದುವರೆಸಿದ, ಇದರಿಂದ ಕುಪಿತಗೊಂಡ ಯುವತಿ ಆತನಿಗೆ ಕಪಾಳಮೋಕ್ಷ ಮಾಡಿದರು.

ಆದರೆ ಈ ಸಂದರ್ಭದಲ್ಲಿ ಬಸ್ಸಿನಲ್ಲಿದ್ದ ಯಾರೂ ಸಹ ಯುವತಿಯ ಸಹಾಯಕ್ಕೆ ಬರಲಿಲ್ಲ. ಇದರಿಂದ ಕಾಮುಕ ಯುವತಿಯಿಂದ ಬಿಡಿಸಿಕೊಂಡು ಓಡಿ ಹೋಗಿದ್ದಾನೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲವಾದರೂ ಪ್ರಯಾಣಿಕರೊಬ್ಬರು ರೆಕಾರ್ಡ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ