Monday, November 23, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ, 7ನೇ ತರಗತಿ ವಿದ್ಯಾರ್ಥಿ ವಿಶಾಲ್ ತುಮಕೂರು ನಗರದ ವಿಜಯನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಸರ್ವೋದಯ ಸ್ಕೂಲ್ ನಲ್ಲಿ 7ನೇ ತರಗತಿ ಓದುತ್ತಿದ್ದ ಈತ, ತಾಯಿ ಶಕುಂತಲಾ ಜೊತೆ ವಿಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿಸಲಾಗಿದೆ.
ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಶಕುಂತಲಾ ನಟರಾಜ್‌ ಅವರನ್ನು ಬಂಧಿಸಿಲಾಗಿತ್ತು. ಬಳಿಕ ಜಾಮೀನನ ಮೇಲೆ ಬಿಡುಗಡೆಯಾಗಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ