Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಮದುವೆ ನಿಶ್ಚಯವಾಗಿದ್ದ ಯುವತಿ ಅಪಘಾತದಲ್ಲಿ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಿನ್ನೆ ಸಂಜೆ ನಡೆದ ಎರಡು ಬೈಕ್​ಗಳ ನಡುವಿನ ಮುಖಾಮುಖಿ ಅಪಘಾತದಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ ಬಿ.ಕೆ ಶರಣ್ಯಗೌಡ (25) ಸಾವಿಗೀಡಾಗಿದ್ದಾರೆ.

ಮಳವಳ್ಳಿ ತಾಲೂಕಿನ ಬಳೆಹೊನ್ನಿಗ ಗ್ರಾಮದ ನಿವಾಸಿ ಕೃಷ್ಣೇಗೌಡ ಅವರ ಪುತ್ರಿ ಶರಣ್ಯ ಗೌಡ ಅವರು ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಕೆಲಸ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನದಿಂದ ಹಲಗೂರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಶರಣ್ಯ ಹಲಗೂರಿಗೆ ಪ್ರಯಾಣಿಸುತ್ತಿದ್ದಾಗ ಅವರ ಸ್ಕೂಟರ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ತೀವ್ರ ರಸ್ತಸ್ರಾವದಿಂದ ಶರಣ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲಗೂರು ಪೊಲೀಸರು ನೀಡಿರುವ ಮಾಹಿತಿ ಅನ್ವಯ, ಶರಣ್ಯ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ತಲೆಗೆ ತೀವ್ರ ಗಾಯಗಳಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಲ್ಮೆಟ್ ಧರಿಸಿದ್ದ ಇನ್ನೊಂದು ಬೈಕ್ ಸವಾರನ ಕೈಗಳಿಗೆ ಗಾಯಗಳಾಗಿವೆ. ಅವರು ಪ್ರಸ್ತುತ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದಿನ ತಿಂಗಳು ಫೆಬ್ರವರಿ 16ರಂದು ಶರಣ್ಯ ಮದುವೆ ನಿಶ್ಚಿಯವಾಗಿತ್ತು. ಆದರೆ, ದಾಂಪತ್ಯ ಜೀವನಕ್ಕೆ ಕಾಲಿಡುವ ಅವರು ದುರಂತ ಅಂತ್ಯ ಕಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ