Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಮದುವೆಯಾದ ಮೂರೇ ದಿನಕ್ಕೆ ಹೃದಯ ಸ್ತಂಭನ ; ಮಧುಮಗ ಸಾವು

ಅನ್ಯ ರಾಜ್ಯದ ಯುವತಿಯನ್ನು ಪ್ರೀತಿಸಿ ಕೈ ಹಿಡಿದಿದ್ದ ಯುವಕ ಮದುವೆಯಾದ ಮೂರೇ ದಿನಕ್ಕೆ ಹೃದಯ ಸ್ತಂಭನಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ.

ಕೆ.ಆರ್.ಪೇಟೆ ಪುರಸಭೆಯ ಹಿರಿಯ ಸದಸ್ಯ ಕೆ.ಸಿ.ಮಂಜುನಾಥ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ವನಿತಾ ಮಂಜುನಾಥ್ ಅವರ ಪುತ್ರ ಶಶಾಂಕ್ (28) ಹೃದಯ ಸ್ತಂಭನದಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.

ಕಳೆದ ಮಾ.2ರ ಭಾನುವಾರವಷ್ಟೇ ತಾನು ಪ್ರೀತಿಸಿದ್ದ ಜಾರ್ಖಂಡ್ ಮೂಲದ ಯುವತಿ ಅಷ್ಣಾ ಅವರನ್ನು ವಿವಾಹವಾಗಿದ್ದರು. ಆದರೆ ಮಂಗಳವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಸಹ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಶಶಾಂಕ್ ಅಂತ್ಯಕ್ರಿಯೆ ಇಂದು ಕೆ.ಆರ್.ಪೇಟೆ ಪಟ್ಟಣದಲ್ಲಿನ ಅವರ ಜಮೀನಿನಲ್ಲಿ ನಡೆಯಿತು.

ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಹಾಗೂ ಭಾರತೀಯ ಸ್ಟೇಟ್ ಬ್ಯಾಂಕಿನ ನೌಕರರು ತೀವ್ರ ಸಂತಾಪ ಸೂಚಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ