Friday, September 20, 2024

ಪ್ರಾಯೋಗಿಕ ಆವೃತ್ತಿ

ತಮಿಳುನಾಡು| ತಿರುವಳ್ಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶಶಿಕಾಂತ್‌ ಸೆಂಥಿಲ್‌ ಜಯಭೇರಿ

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 294 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 232 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 32 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಗೆಲುವನ್ನು ಸಾಧಿಸಿದ್ದಾರೆ. ಶಶಿಕಾಂತ್‌ ಸೆಂಥಿಲ್‌ ಡಿಎಂಡಿಕೆಯ ನಲ್ಲತಂಬಿ ವಿರುದ್ಧ 2 ಲಕ್ಷ 14 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಾಲಗಣಪತಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ತಿರುವಳ್ಳೂರು ಕ್ಷೇತ್ರದಲ್ಲಿ ಶಶಿಕಾಂತ್‌ ಸೆಂಥಿಲ್‌ ಆರಂಭದಿಂದಲೇ ಭಾರೀ ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!