ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವವರು ಸಾಧಕರು ಪ್ರಾತಃಸ್ಮರಣಿಯರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸೀಫ್ ಹೇಳಿದರು.
ಮಂಡ್ಯ ನಗರದಲ್ಲಿರುವ ಕರ್ನಾಟಕ ಸಂಘದ ಕೆವಿಎಸ್ಎಸ್ ಭವನದಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗ ಮಂಡ್ಯ ಜಿಲ್ಲೆ ಆಯೋಜಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವಿಸ್ಮರಣೀಯವಾದ ಸೇವೆ ಸಲ್ಲಿಸಿರುವ ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜಕ್ಕಾಗಿ ಸಮಯ ವಿನಿಯೋಗಿಸಿ ಉತ್ತಮ ಸೇವೆ ನೀಡುವವರನ್ನು ಸಮಾಜ ಎಂದಿಗೂ ಮರೆಯದು, ಸೇವಾ ಕಾರ್ಯಮಾಡುವವನ್ನು ಅಭಿನಂದಿಸಿದರೆ ಮತ್ತಷ್ಟು ಸೇವಾಕಾರ್ಯ ಮಾಡಲು ಪ್ರೇರಣೆ ನೀಡಲಾಗುತ್ತದೆ ಎಂದು ನುಡಿದರು.

ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳು ಮತ್ತು ಸೌಲಭ್ಯಗಳನ್ನು ನೀಡುತ್ತದೆ, ಸಂವಿಧಾನದಿಂದ ಎಲ್ಲರೂ ಸಮಾನರು ಮತ್ತು ಹಕ್ಕುಗಳನ್ನು ಪಡೆದುಕೊಳ್ಳುತ್ತಾರೆ, ಮನುಷ್ಯರು ಜೀವನ ಸುಧಾರಣೆಗೆ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗ ಮಂಡ್ಯ ಜಿಲ್ಲಾಧ್ಯಕ್ಷ ಸುಂಡಹಳ್ಳಿ ಮಂಜುನಾಥ್ ಮಾತನಾಡಿ, ಬುದ್ದ, ಬಸವ, ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ದಾಂತಗಳ ಮಾರ್ಗದಲ್ಲಿ ನಡೆಯುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನವನ್ನು ಪ್ರತಿವರ್ಷ ವಿವಿಧ ಸೇವಾಕಾರ್ಯದ ಮೂಲಕ ಆಚರಿಸಿಕೊಂಡು ಬರುತ್ತಿದ್ದೇವೆ ಎಂದರು.
ಸಾಧಕರಿಗೆ ಮತ್ತು ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ ಯಾಕೆ ನೀಡುತ್ತಿದ್ದೇವೆ ಎಂದರೆ ಪ್ರಿಯಾಂಕ್ ಖರ್ಗೆ ಅವರು ಬಸವಣ್ಣ ಮತ್ತು ಬುದ್ದ, ಅಂಬೇಡ್ಕರ್ ಅವರ ಆಶಯಗಳನ್ನು ಅನುಸರಿಸುತ್ತಾರೆ, ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದಾರೆ, ಆದ್ದರಿಂದ ಬಸವಶ್ರೀ ಪುರಸ್ಕಾರ ನೀಡುತ್ತಿದ್ದೇವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಸಂವಿಧಾನ ಪ್ರಜ್ಞೆ ಹೆಚ್ಚಿಸಲು ಪ್ರಬಂಧ ಸ್ಪರ್ಧೆ ನಡೆಸಿ, ಸಂವಿಧಾನ ಪುಸ್ತಕಗಳನ್ನು ನೀಡುತ್ತಿದ್ದೇವೆ, ನಾಗಕರೀಕರು ಕೂಡ ಸಂವಿಧಾನ ಮಹತ್ವವನ್ನು ತಿಳಿದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ ನೀಡಿ ಹಾಗೂ ಪ್ರಬಂಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಮುಡಾ ಅಧ್ಯಕ್ಷ ನಹೀಂ, ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ , ಮೈಷುಗರ್ ಕಾರ್ಖಾನೆಯ ಅಧ್ಯಕ್ಷ ಸಿ ಡಿ ಗಂಗಾಧರ್, ಮಿಮ್ಸ್ ನಿರ್ದೇಶಕ ಡಾ. ನರಸಿಂಹ ಸ್ವಾಮಿ, ಮಹಿಳಾ ಸರ್ಕಾರಿ ಕಾಲೇಜಿನ ಆಂಗ್ಲ ಪ್ರಾಧ್ಯಾಪಕ ಪ್ರಸನ್ನ ಕುಮಾರ್ ಕೆರಗೋಡು, ಹಾಗೂ ನಿವೃತ್ತ ಪ್ರಾಧ್ಯಾಪಕ ಪಿ ಡಿ ತಿಮ್ಮಪ್ಪ, ವರದಿಗಾರ ಡಿ.ಶಶಿಕುಮಾರ್, ದೈಹಿಕ ಶಿಕ್ಷಕ ಉಷಾರಾಣಿ, ಪ್ರೌಢಶಾಲಾ ಶಿಕ್ಷಕ ಡಾ.ಕೆ ಶಬಾನಾ, ನಿರ್ಮಾಪಕÀ ಅಖಿಲೇಶ್ ಗೌಡಗೆರೆ, ವಿಜಯಕುಮಾರ್ ಚಂದಗಾಲು ಮತ್ತಿತರರಿದ್ದರು.




