Saturday, November 21, 2026

ಪ್ರಾಯೋಗಿಕ ಆವೃತ್ತಿ

ಕಾರ್ಮಿಕರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದ ಡಾ.ಬಾಬೂಜಿ : ಶೇಖ್ ತನ್ವೀರ್ ಆಸಿಫ್

ಭಾರತದಲ್ಲಿ ಬಹಳಷ್ಟು ಜನರು ಕಾರ್ಮಿಕ ವರ್ಗಕ್ಕೆ ಸೇರಿದವರಾಗಿದ್ದು, ಅವರನ್ನು ಆರ್ಥಿಕವಾಗಿ ಸಬಲರಾಗಿಸಲು ಮೊದಲ ಬಾರಿಗೆ ಎಂಪ್ಲಾಯಿ ಪ್ರವಿಡೆಂಟ್ ಫಂಡ್ ಎಂಬ ಪರಿಕಲ್ಪನೆಯನ್ನು ಡಾ.ಬಾಬು ಜಗಜೀವನರಾಂ ಅವರು ಜಾರಿಗೆ ತಂದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಂಡ್ಯ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಭಾರತದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 117 ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಿಸಲು ಹಲವಾರು ಕಾಯ್ದೆಯನ್ನು ಜಾರಿಗೆ ತಂದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಡಾ: ಬಾಬು ಜಗಜೀವನ ರಾಂ ಅವರು ಬಡತನದ ತೊಂದರೆಗಳನ್ನು ಹತ್ತಿರದಿಂದ ಅರಿತಿದ್ದರು. ಆರ್ಥಿಕ ಅಸಮಾನತೆ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದರು ಎಂದರು.

nudikarnataka.com

ಮಂಡ್ಯ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಾಜು ಮಾತನಾಡಿ, ಭಾರತ ಕಂಡಂತಹ ಅಪ್ರತಿಮ ನಾಯಕ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದೀನ ದಲಿತರ ಆರಾಧ್ಯ ದೈವ, ಭವ್ಯ ಪರಂಪರೆಯ ಹಸಿರುಕಾರ, ಭ್ರಷ್ಟಾಚಾರ ಕಳಂಕ ಅಂಟಿಸಿಕೊಳ್ಳದಂತಹ ಶುದ್ಧ ಚಾರಿತ್ರ್ಯ, ಅಪ್ಪಟ ಪವಿತ್ರ ಚಿನ್ನ ಬಾಬು ಜಗಜೀವನರಾಂ ಅವರು ಎಂದು ಬಣ್ಣಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಡಾ.ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್ ಉಪಸ್ಥಿತರಿದ್ದರು.

ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟದಿಂದ ಮಾಲಾರ್ಪಣೆ

ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಡಾ.ಬಾಬು ಜಗಜೀವನರಾಂ ಸಂಘಗಳ ಒಕ್ಕೂಟದ ಅಧ್ಯಕ್ಷ ಎನ್.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ಸಮುದಾಯದ ಹಲವು ಮುಖಂಡರು ಡಾ.ಬಾಬೂಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಿ.ಕೆ.ಪಾಪಯ್ಯ, ವಕೀಲ ಕನ್ನಲಿ ಕೆಂಪಯ್ಯ, ಬಸರಾಳು ಶ್ರೀನಿವಾಸ್, ಚಂದ್ರಶೇಖರ್ ಮುದಗಂದೂರು, ಎನ್.ಶೇಖರ್, ಜಗದೀಶ್ ಹೆಚ್.ಜೆ, ರವಿಕುಮಾರ್ ಮಾರಗೌಡನಹಳ್ಳಿ, ಪ್ರಸನ್ನ, ಹಂಪಾಪುರ ಶಿವಬೋರಯ್ಯ, ಶಿವಲಿಂಗಯ್ಯ ಮತ್ತಿತರರು ಶಂಭು, ಕಾಂತರಾಜು, ಬಿಳಿಯಯ್ಯ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ