Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶೇಖರ್- ಬೋರಯ್ಯಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಜಾನಪದ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಮಂಡ್ಯ ತಾಲ್ಲೂಕಿನ ಹನಿಯಂಬಾಡಿ ಗ್ರಾಮದ ಕಲಾವಿದ ಎನ್.ಶೇಖರ್ ಹಾಗೂ ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಕಲಾವಿದ ಎಚ್.ಕೆ.ಬೋರಯ್ಯ ಅವರನ್ನು ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ನಾಳೆ (ನ.1) ಮಂಡ್ಯ ನಗರದಲ್ಲಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ