Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಅಂಬೇಡ್ಕರ್ ಜನ್ಮದಿನಾಚರಣೆ : ‘ನಿರಾಶ್ರಿತರಿಗೆ ನೆರಳು’ ಕಾಮಗಾರಿಗೆ ಗುದ್ದಲಿಪೂಜೆ

ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಮದ್ದೂರು ತಾಲ್ಲೂಕಿನ ಹುಲಿಗೆರೆಪುರ ನಿಸರ್ಗ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ನಿರಾಶ್ರಿತರಿಗೆ ಮನೆ ನಿರ್ಮಿಸಿ ಕೊಡುವ  ‘ನಿರಾಶ್ರಿತರಿಗೆ ನೆರಳು’ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕ್ರಮವು ಏ.14ರಂದು ಬೆಳಿಗ್ಗೆ 11 ಗಂಟೆಗೆ ಹುಲಿಗೆರೆಪುರ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ನಡೆಯಲಿದೆ.

ಹುಲಿಗೆರೆಪುರದ ಜಯಮ್ಮ ಬಿನ್ ಕೋಳಿ ಬೋರಯ್ಯ ಹಾಗೂ ಬ್ಯಾಲದಕೆರೆ ಗ್ರಾಮದ ಬೋರಮ್ಮ ಬಿನ್ ಕೋಂ ಲೇಟ್ ತಿಮ್ಮಯ್ಯ ಇವರಿಗೆ ಸೂರು ನಿರ್ಮಿಸಿಕೊಡುವ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ನಿಸರ್ಗ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಹುಲಿಗೆರೆಪುರ ಮಹದೇವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ