Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕುರುಬ ಸಮಾಜ – ಸಿಎಂ ಗೆ ಅವಹೇಳನ : ಕಿಡಿಗೇಡಿಗಳ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್,ಕಾಂಗ್ರೆಸ್ ಮುಖಂಡರಾದ ಕರಡಿಕೊಪ್ಪಲು ಕೆ.ಸಿ.ಪುಟ್ಟಸ್ವಾಮಿಗೌಡ,
ಕೋಡಿ ಕೊಪ್ಪಲು ನಾಗೇಶ್, ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ನೇತೃತ್ವದಲ್ಲಿ ಮುಖಂಡರುಗಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮಾಜ ಮತ್ತು ಮಂಡ್ಯ ಜಿಲ್ಲೆಯ ಬಗ್ಗೆ ಅವಹೇಳನ ಕಾರಿಯಾಗಿ ನಿಂದಿಸಿರುವ ಮಂಡ್ಯ ತಾಲೂಕು ಬಸರಾಳು ಗ್ರಾಮದ ಹೇಮಾವತಿ ಬಡಾವಣೆಯ ಶಾನುಭೋಗನಹಳ್ಳಿ ಕುಮಾರ್‌ ಮತ್ತು ಬೆನ್ನಹಟ್ಟಿಯ ಮಹೇಶ್ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಾತಿಯ (ಕುರುಬ) ಬಗ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ರವರ ಬಗ್ಗೆ ಅವಾಚ್ಯ ಶಬ್ದಗಳು ಕೀಳುಮಟ್ಟದ ಪದಗಳನ್ನು ಬಳಸಿ ಬೆದರಿಕೆ ಹಾಕಿದ್ದಾರೆ.ಸರ್ಕಾರ ನಿಮ್ಮದೇ ಇದೆ. ತಾಕತ್ತಿದ್ದರೆ ನಮ್ಮ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಜಾಲತಾಣದಲ್ಲಿ ಸವಾಲಾಕಿರುತ್ತಾರೆ. ಮಂಡ್ಯ ಜಿಲ್ಲೆಯು ಸಾಮರಸ್ಯಕ್ಕೆ ಹೆಸರಾಗಿದ್ದು,ಇಂತಹ ಕಿಡಿಗೇಡಿಗಳು, ಕೀಳುಮಟ್ಟದ ಮನಸ್ಸಿತಿವುಳ್ಳವ ರಿಂದ ಸಮಾಜದಲ್ಲಿ ಸಾಮರಸ್ಯ ಕೆಡುವಂತಹ ಪರಿಸ್ಥಿತಿ ಉಂಟಾಗು ತ್ತದೆ.ಆದ್ದರಿಂದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸ ಬೇಕಾಗಿ ಈ ಮೂಲಕ ವಿನಂತಿಸಿದರು.

ಬಸರಾಳು ಬಂದ್

ಕಾಂಗ್ರೆಸ್ ಮುಖಂಡ ಕೋಡಿಕೊಪ್ಪಲು ನಾಗೇಶ್ ಮಾತನಾಡಿ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಆ.13 ರ ಬುಧವಾರ ಬಸರಾಳು ಬಂದ್ ಗೆ ಕರೆಕೊಡಲಾಗಿದೆ. ಹತ್ತು ಸಾವಿರ ಮಂದಿ ರಾಜ್ಯಾದ್ಯಂತ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಭಾಗವಹಿಸುತ್ತಿದ್ದು ಬಂದ್ ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಕರಡಿಕೊಪ್ಪಲು ಕೆ.ಸಿ.ಪುಟ್ಟಸ್ವಾಮಿ ಗೌಡ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮಾಜದ ಮನೆ ದೇವರು ಅವರ ಬಗ್ಗೆ ಹಾಗೂ ಕುರುಬ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರುವುದನ್ನು ಖಂಡಿಸಿ ಆಗಸ್ಟ್ 13 ರಂದು ನೆಡೆಯುವ ಬಸರಾಳು ಬಂದ್ ಗೆ ಸ್ವಯಂ ಪ್ರೇರಿತವಾಗಿ ಸಾವಿರಾರು ಜನರು ಭಾಗವಹಿಸು ತ್ತಿದ್ದು ಪ್ರತಿಭಟನೆ ಯಶಸ್ವಿ ಗೊಳಿಸುವ ಮೂಲಕ ಕಿಡಿಗೇಡಿ ಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಸಮಾಜದಲ್ಲಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಇಂತಹ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಡಾ ನಿರ್ದೇಶಕ ಎನ್.ದೊಡ್ಡಯ್ಯ, ಸಾತನೂರು ರಾಜು, ಶ್ರೀಧರ್, ಮಹೇಶ್,ಪ್ರದೀಪ್,
ಚಂದ್ರು, ಶೈಲೇಂದ್ರ, ಮಹೇಶ್, ಸೇರಿದಂತೆ ಇತರರು ಭಾಗವಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ