Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾರಿನ ಮೇಲೆ ಗುಡ್ಡ ಕುಸಿತ| ಶಿರಾಡಿಘಾಟ್‌ ಸಂಚಾರ ಬಂದ್

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆ-ಗಾಳಿಗೆ ಗುಡ್ಡ ಕುಸಿತಗಳೂ ಸಂಭವಿಸುತ್ತಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ರಾಷ್ಟ್ರೀಯ ಹೆದ್ದಾರಿಯ ಶಿರಾಡಿಘಾಟ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಗುರುವಾರ ತಡರಾತ್ರಿ ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿದಿದ್ದು, ವಾಹನಗಳು ಸಂಚರಿಸಲಾಗದೆ, ರಸ್ತೆಯ ಎರಡೂ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ವಾಹನಗಳು ಬಂದದಾರಿಯಲ್ಲಿ ವಾಪಸ್‌ ಹೋಗಿವೆ. ಸದ್ಯ, ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿಯ ಗುಡ್ಡಗಳು ಕುಸಿಯುತ್ತಿವೆ ಎಂದು ಸ್ಥಳೀಯರು ಮತ್ತು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಮುಂಜಾನೆ ಕೂಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು, ಹೆದ್ದಾರಿ ಪಕ್ಕದಲ್ಲಿ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!