Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿರುವ 33 ಕಾರ್ಖಾನೆಗಳಿಗೆ ನೋಟಿಸ್: ಸಚಿವ ಶಿವಾನಂದ ಪಾಟೀಲ

ರಾಜ್ಯದಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ 65 ಕಾರ್ಖಾನೆಗಳು 3,101.91 ಕೋಟಿ ರೂ.ಗಳು ಪಾವತಿ ಮಾಡುವುದು ಬಾಕಿ ಇದೆ. ಶೀಘ್ರ ಹಣ ಪಾವತಿಸುವಂತೆ 33 ಸಕ್ಕರೆ ಕಾರ್ಖಾನೆಗಳಿಗೆ ಈಗಾಗಲೇ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ರವರ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ ರಾಜ್ಯದಲ್ಲಿ ಒಟ್ಟು 99 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿದ್ದು, ಇವುಗಳ ಪೈಕಿ 79 ಕಾರ್ಖಾನೆಗಳು ಪ್ರಸ್ತುತ ಕಾರ್ಯನಿರತವಾಗಿವೆ. 2024-25ನೇ ಹಂಗಾಮಿನಲ್ಲಿ 2025ರ ಫೆ. 28ರ ಅಂತ್ಯಕ್ಕೆ ಕಬ್ಬು ಸರಬರಾಜು ಮಾಡಿದ ರೈತರಿಗೆ 17,596.92 ಕೋಟಿ ರೂಪಾಯಿ ಬಿಲ್ ಪಾವತಿ ಮಾಡಬೇಕಿದ್ದು, ಅವುಗಳಲ್ಲಿ 14,655.91 ಕೋಟಿ ರೂ. ಮೊತ್ತವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀಯ ನಗರದ ಚಾಮುಂಡೇಶ್ವರಿ ಶುಗರ್ ಲಿಮಿಟೆಡ್ ನವರು ರೈತರ ಕಬ್ಬಿನ ಬಾಕಿ ಬಿಲ್ಲನ್ನು ಉಳಿಸಿಕೊಂಡಿದ್ದು ಶೀಘ್ರವೇ ಮರುಪಾವತಿ ಮಡುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ರೈತರ ಪರವಾಗಿ ಮನವಿ ಮಾಡುತ್ತೇನೆ.
– ದಿನೇಶ್ ಗೂಳಿಗೌಡ ಶಾಸಕರು ವಿಧಾನ ಪರಿಷತ್

nudikarnataka.com Dinesh Gooligowda

2024-25ನೇ ಸಾಲಿನ ಕಬ್ಬು ಅರೆಯುವ ಹಂಗಾಮು ಚಾಲ್ತಿಯಲ್ಲಿದ್ದು, ಕಬ್ಬು ಬಿಲ್ಲು ಪಾವತಿಸಲು ಅವಕಾಶವಿರುತ್ತದೆ. ಆದಾಗ್ಯೂ, 2024-25ನೇ ಹಂಗಾಮಿನಲ್ಲಿ ಕಬ್ಬು ಬಿಲ್ಲು ಉಳಿಸಿಕೊಂಡಿರುವ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಇದೇ ಜನವರಿ16 ಮತ್ತು ಫೆ.4 ರಂದು ಶಾಸನಬದ್ಧ ನೋಟಿಸುಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಶೇ.15 ರ ಬಡ್ಡಿ ನೀಡಬೇಕು

ಕಬ್ಬು (ನಿಯಂತ್ರಣ) ಆದೇಶ 1966 ರ ಖಂಡ 3 ರಲ್ಲಿ, ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ 14 ದಿನಗಳ ಒಳಗಾಗಿ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಬಿಲ್ಲನ್ನು ಪಾವತಿಸಬೇಕಿದೆ. ನಿಗದಿತ ಅವಧಿಯಲ್ಲಿ ಕಬ್ಬಿನ ಬಿಲ್ಲನ್ನು ಪಾವತಿ ಮಾಡದೇ ಇದ್ದಲ್ಲಿ ಕಬ್ಬು (ನಿಯಂತ್ರಣ) ಆದೇಶ 1966 ರ ಖಂಡ (3A) ರನ್ವಯ 14 ದಿನಗಳ ನಂತರ ತಡವಾಗಿ ಪಾವತಿಸಿದ ದಿನಗಳಿಗೆ ಶೇ.15 ರಷ್ಟು ಬಡ್ಡಿಯನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾಗಿರುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಭೂ ಕಂದಾಯ ಬಾಕಿ ಎಂದು ಪರಿಗಣನೆ

ನಿಗದಿತ ಅವಧಿಯೊಳಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಿಲ್ಲನ್ನು ಪಾವತಿಸದಿದ್ದಲ್ಲಿ ಭೂಕಂದಾಯದ ಬಾಕಿಯಂತೆ ಕಬ್ಬು ಬಿಲ್ಲು ವಸೂಲು ಮಾಡಲು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ವಸೂಲಾತಿ ಪ್ರಮಾಣ ಪತ್ರವನ್ನು ಹೊರಡಿಸಲು ಕಬ್ಬು (ನಿಯಂತ್ರಣ) ಆದೇಶ 1966 ರ ಖಂಡ 8 ರಲ್ಲಿ ಅವಕಾಶವಿದೆ. ಸರ್ಕಾರದ ಅಧಿಸೂಚನೆಯಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ವಸೂಲಾತಿ ಪ್ರಮಾಣ ಪತ್ರವನ್ನು ಹೊರಡಿಸುವ ಅಧಿಕಾರವನ್ನು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ಮತ್ತು ಆಯುಕ್ತರಿಗೆ ನೀಡಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ