Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾವೇರಿ ಸಂಕಷ್ಟ ನಿವಾರಿಸುವಂತೆ ಗಣಪನಿಗೆ ಮೊರೆ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಕೇಳೋರಿಲ್ಲ. ಪ್ರಕೃತಿಗೆ ವಿರುದ್ಧವಾದ ಆದೇಶಗಳು ಹೊರಬೀಳುತ್ತಿವೆ. ನಮ್ಮ ನೀರಿನ ಪಾಲನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಕಷ್ಟ ನಿವಾರಿಸುವಂತೆ ಮಂಡ್ಯ ಯೂತ್ ಗ್ರೂಪ್ ವತಿಯಿಂದ ಗಣಪನಿಗೆ ಪೂಜೆ ಸಲ್ಲಿಸಲಾಯಿತು.

ಮಂಡ್ಯ ನಗರದ ಹೊಸಹಳ್ಳಿ ವೃತ್ತದ ಬಳಿ ಮಣ್ಣಿನ ಗಣಪನನ್ನು ಸ್ಥಳದಲ್ಲೇ ತಯಾರಿಸಿ ಪೂಜೆ ಸಲ್ಲಿಸುವುದರೊಂದಿಗೆ ನೀರಿನ ಸಂಕಷ್ಟ ಪರಿಸ್ಥಿತಿಯಿಂದ ಮುಕ್ತಿ ದೊರಕಿಸುವಂತೆ ಪ್ರಾರ್ಥಿಸಿದರು. ಅಲ್ಲದೆ, ಪರಿಸರ ಸ್ನೇಹಿ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಲು ವಿನೂತನ ಹೋರಾಟ ನಡೆಸಿದರು.

ಗ್ರೂಪ್ ಅಧ್ಯಕ್ಷ ಡಾ.ಅನಿಲ್ ಆನಂದ್ ಮಾತನಾಡಿ, ಕಾವೇರಿ ನೀರಿನ ವಿಚಾರವನ್ನುರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಕೇಂದ್ರಸರ್ಕಾರ ಮಧ್ಯ ಪ್ರವೇಶಿಸುತ್ತಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ಪರಿಸ್ಥಿತಿಯನ್ನು
ಅವಲೋಕಿಸದೆ ಆದೇಶ ಹೊರಹಾಕುತ್ತಿದೆ. ಸುಪ್ರೀಂಕೋರ್ಟ್ ವಿಚಾರಣೆಯನ್ನು ಮುಂದೂಡುತ್ತಲೇ ಇದೆ. ಇಂತಹ ಸನ್ನಿವೇಶದಲ್ಲಿ ರಾಜ್ಯದ ಜನರು ನ್ಯಾಯಕ್ಕಾಗಿ ಯಾರ ಮೊರೆ ಹೋಗುವುದು ಎನ್ನುವುದೇ ಪ್ರಶ್ನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಯೂತ್ ಗ್ರೂಪ್ ನ ದರ್ಶನ್, ರಾಜಣ್ಣ, ಪವನ್, ನವೀನ್, ಸೀನಪ್ಪ, ಹರ್ಷದ್, ಸೈಯದ್ ಸೇರಿದಂತೆ ಇತರರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ