ಮದ್ದೂರು ತಾಲೂಕಿನ ರಾಂಪುರ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಶ್ರೀ ಆದಿಷ್ಠ ಸುಬ್ರಮಣ್ಯ ಸನ್ನಿಧಿಯಲ್ಲಿ ಸುಬ್ರಮಣ್ಯ ಷಷ್ಠಿ ಜಾತ್ರಾ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಸುಬ್ರಮಣ್ಯ ಷಷ್ಠಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸೋಮವಾರ ದೇವಾಲಯಲ್ಲಿ ಕಲ್ಯಾಣೋತ್ಸವ, ಮಂಗಳವಾರ ಪಂಚಾಮೃತ ಅಭಿಷೇಕ, ಪ್ರಧಾನ ಕಳಾಸಭಿಷೇಕ, ಸುಬ್ರಮಣ್ಯ ಹೋಮ ಸೇರಿದಂತೆ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಸ್ಥಾನಕ್ಕೆ ಆಗಮಿಸಿದ ಸಹಸ್ರಾರು ಭಕ್ತಾದಿಗಳು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪುನೀತರಾದರು. ಭಕ್ತಾದಿಗಳಿಗೆ ದೇಗುಲದಲ್ಲಿ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ:ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ
ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಮಹಿಳೆಯರು ಮತ್ತು ಭಕ್ತರು ಹುತ್ತಕ್ಕೆ ತನಿ ಎರೆದು ಧನ್ಯತಾ ಭಾವ ಮರೆದರು.




