Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸ್ವಚ್ಚತಾ ಕಾರ್ಯಕ್ಕೆ ಜನರ ಸಹಕಾರ ಅಗತ್ಯ

ಸರ್ಕಾರಿ ಕಚೇರಿ, ಕಟ್ಟಡ, ಶಾಲೆ, ಆಸ್ಪತ್ರೆ ಹಾಗೂ ಇನ್ನಿತರ ಸರ್ಕಾರಿ ಕಟ್ಟಡಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಅಗತ್ಯವೆಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ ಹೇಳಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ ಕಾರ್ಯಾಲಯ, ಕಸಬಾ ಹೋಬಳಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)- ಸ್ವಚ್ಛತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮಕ್ಕೆ ಮಂಡ್ಯದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಪ್ರೌಢಶಾಲೆಯ ಮೈದಾನ ಸ್ವಚ್ಛಗೊಳಿಸುವುದು ಹಾಗೂ ಶೌಚಾಲಯ ಕಟ್ಟಡಗಳನ್ನು ಪೈಂಟ್ ಮಾಡುವ ಕೆಲಸವನ್ನು ಮಾಡಿದ್ದೇವೆ, ಇದರ ಜೊತೆಗೆ ಶಾಲೆಯ ನವೀಕರಣಕ್ಕೆ ಬಹಳ ಉಪಯುಕ್ತವಾದ ಆಟದ ಮೈದಾನ ಇನ್ನಿತರ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ ಎಂದರು.

ಸಂಸದೆ ಸುಮಲತಾ ಅಂಬರೀಶ್ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಹಾಗೂ ಬಾಕಿ ಉಳಿದಂತಹ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದ ಅವರು,  ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಅತ್ಯಂತ ನಿಷ್ಠೆಯಿಂದ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಲು ಸೂಚನೆ ಹಾಗೂ ಸಲಹೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿರುವಂತಹ ಕುಂದು ಕೊರತೆಗಳನ್ನು ವೈಯಕ್ತಿಕವಾಗಿ ಗಮನ ಹರಿಸಿ ಎಲ್ಲವನ್ನು ಬಗೆಹರಿಸುವಂತಹ ಕೆಲಸಗಳನ್ನು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಜಿ.ಪಂ.ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಶಾಂತಾ ಎಲ್.ಹುಲ್ಮನಿ, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ, ಯೋಜನಾ ನಿರ್ದೇಶಕ ಧನರಾಜ್ ಬೋರಳೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ, ಬಿಇಒ ಚಂದ್ರಕಾಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ