Thursday, September 19, 2024

ಪ್ರಾಯೋಗಿಕ ಆವೃತ್ತಿ

”ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು” : ಬಿಜೆಪಿ ನಾಯಕರ ಕಾಲೆಳೆದ ಸಿದ್ದರಾಮಯ್ಯ

ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃ ಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು ಎಂದು ಹೇಳಿಕೊಂಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು, ರಾಮನ ಹೆಸರಿನಲ್ಲಿ ದ್ವೇಷ ಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು. ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ ಎಂದು ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ.

“>

ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯ ಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು ಎಂದು ಸಿದ್ದರಾಮಯ್ಯ ನಾಡಿನ ಜನತೆಗೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!