Saturday, May 18, 2024

ಪ್ರಾಯೋಗಿಕ ಆವೃತ್ತಿ

ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ ; ಕುಟುಂಬಕ್ಕೂ ಸಮಯ ಕೊಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು. ಆದರೆ ಈಗ ನಿಮ್ಮ ಕುಟುಂಬಕ್ಕೂ ಸಮಯ ಕೊಡಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

“>

ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!