Saturday, May 18, 2024

ಪ್ರಾಯೋಗಿಕ ಆವೃತ್ತಿ

ಮತ್ತೊಮ್ಮೆ ಸಿದ್ದರಾಮಯ್ಯ ಕರ್ನಾಟಕದ ಸಿಎಂ – ಡಿ.ಕೆ.ಶಿವಕುಮಾರ್ ಡಿಸಿಎಂ

ರಾಜ್ಯದ ಮುಖ್ಯಮಂತ್ರಿಯಾಗಿ ಭಾಗ್ಯಗಳ ಸರದಾರ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.  ಕಳೆದ ನಾಲ್ಕು ದಿನಗಳಿಂದ ಮುಂದುವರೆದಿದ್ದ ಮುಖ್ಯಮಂತ್ರಿ ಆಯ್ಕೆ ವಿಚಾರದ ಹಗ್ಗಜಗ್ಗಾಟ ಅಂತಿಮ ಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಹಾಗೂ ಡಿಕೆ ಶಿವಕುಮಾರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈ ಕಮಾಂಡ್ ನಿರ್ಧರಿಸಿದೆ.

ದೆಹಲಿ ಮೂಲಗಳ ಮಾಹಿತಿ ಪ್ರಕಾರ ಈಗಾಗಲೇ ಈ ಪ್ರಕ್ರಿಯೆ ಅಂತಿಮಗೊಂಡಿದೆ. ಸಿದ್ಧರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಎರಡು ಪ್ರಮುಖ ಖಾತೆಗಳನ್ನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ.

ದೆಹಲಿ ಬೆಳವಣಿಗೆಗೆಳು ಈ ರೀತಿ ಆದರೆ, ರಾಜ್ಯದಲ್ಲೂ ಸಿಎಂ ಆಯ್ಕೆ ವಿಚಾರದ ಕುತೂಹಲ ಕೆರಳಿಸಿದೆ. ಅದರಲ್ಲೂ ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸಿದ್ದರಾಮಯ್ಯಗೆ ನಿವಾಸದ ಬಳಿ ಈಗಾಗಲೇ ಅವರ ಅಭಿಮಾನಿಗಳು ನೆರೆಯತೊಡಗಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಇಲ್ಲಿ ಒಂದು ಕೆಎಸ್ಆರ್ಪಿ ವ್ಯಾನ್, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ನಾಳೆ ಪ್ರಮಾಣ ವಚನ

ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸುವರು. ಈ ಕಾರ್ಯಕ್ರಮಕ್ಕೆ ಎಲ್ಲ ಸಕಾಲ ಸಿದ್ದತೆಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!