Saturday, May 18, 2024

ಪ್ರಾಯೋಗಿಕ ಆವೃತ್ತಿ

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ – ಸಿದ್ದರಾಮಯ್ಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆಂದು ಎಂದು ಕಾಂಗ್ರೆಸ್‌ ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ.

“>

ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್ ಮತ್ತು ರಣ್‌ದೀಪ್ ಸಿಂಗ್ ಸುರ್ಜೇವಾಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶೇಷವಾಗಿ ಡಿಕೆ ಶಿವಕುಮಾರ್​ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆ ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಹೇಳಿದರು.

ಮೇ 20ರಂದು ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ, ಅಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುವರು. ಇದರ ಜೊತೆಗೆ ಆ ದಿನವೇ ಕೆಲವು ಶಾಸಕರು ಸಚಿವರಾಗಿಯೂ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಕೆ.ಸಿ ವೇಣುಗೋಪಾಲ್​ ತಿಳಿಸಿದರು.

ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೂ ಸಮರ್ಥವಾಗಿ ಆಡಳಿತ ಕೊಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ಕಾಂಗ್ರೆಸ್‌ ನೀಡಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಘೋಷಣೆ ಬೆನ್ನಲ್ಲೇ ಟ್ವೀಟ್ ಮಾಡಿದ ಸಿದ್ದರಾಮಯ್ಯ, ”ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ” ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!