Saturday, May 18, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ 5 ಗ್ಯಾರೆಂಟಿಗಳು ಇಂದಿನಿಂದಲೇ ಜಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ 5 ಗ್ಯಾರೆಂಟಿಗಳನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು, ಇಂದಿನಿಂದಲೇ ಜಾರಿ ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಇಂದು ಮುಖ್ಯಮಂತ್ರಿಯಾಗಿ ರಾಜ್ಯಪಾಲ ತಾವರ್ ಚಂದ್ ಗೇಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿ, ನೆರೆದಿದ್ದ ಸಹಸ್ರಾರು ಜನರನ್ನುದ್ದೇಶಿಸಿ ಮಾತನಾಡಿ ಅವರು, ನಮ್ಮದು ನುಡಿದಂತೆ ನಡೆಯುವ ಸರ್ಕಾರ, ಹಿಂದಿನ ಸರ್ಕಾರದಲ್ಲೂ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ, ಈಗಲೂ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ, ಸಚಿವ ಸಂಪುಟದಲ್ಲಿ ಈ ಬಗ್ಗೆ ಇಂದೇ ತೀರ್ಮಾನ ಕೈಗೊಳ್ಳುತ್ತೇವೆಂದರು.

ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಅವರೊಂದಿಗೆ 8 ಮಂದಿ ಹಿರಿಯ ಕಾಂಗ್ರೆಸ್ ನಾಯಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಯಾಂಕಗಾಂಧಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮಿತ್ರ ಪಕ್ಷಗಳ ಹಲವು ನಾಯಕರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!