Thursday, November 19, 2026

ಪ್ರಾಯೋಗಿಕ ಆವೃತ್ತಿ

ಯುವತಿ ಮೇಲೆ ನಾಲ್ವರ ಅತ್ಯಾಚಾರ | ಗೃಹ ಸಚಿವರ ಅದಕ್ಷತೆಯಿಂದ ಪೊಲೀಸ್ ಇಲಾಖೆ ಹಾದಿ ತಪ್ಪಿದೆ ಎಂದ ಸಿದ್ದರಾಮಯ್ಯ

ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“>

ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಅವರು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ. ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ