Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯ ಬಜೆಟ್| ಕೈಗಾರಿಕೆ, ಐಟಿ, ವಾಣಿಜ್ಯ, ನಗರಾಭಿವೃದ್ಧಿ ಕ್ಷೇತ್ರಗಳಿಗೆ ಒತ್ತು…ಸಂಪೂರ್ಣ ವಿವರ ಇಲ್ಲಿವೆ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದು,ಈ ಬಾರಿಯ ಆಯವ್ಯಯದ ಗಾತ್ರ 3,71,383 ಕೋಟಿ ರೂ. ನಷ್ಟಿದೆ.

ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ, ಐಟಿ, ವಾಣಿಜ್ಯ, ನಗರಾಭಿವೃದ್ಧಿ ಕ್ಷೇತ್ರಕ್ಕೆ ಏನೇನು ಕೊಡುಗೆ ನೀಡಿದ್ದಾರೆ? ಇಲ್ಲದೆ ಸಂಪೂರ್ಣ ಮಾಹಿತಿ.

ನಗರಾಭಿವೃದ್ಧಿ 

ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ಮಾರ್ಗ ನಿರ್ಮಾಣ

  • ಬಿಬಿಎಂಪಿ ವ್ಯಾಪ್ತಿಯ ಎಲ್ಲ 20 ಲಕ್ಷ ಆಸ್ತಿಗಳ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25 ಸಾಲಿನಿಂದ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸುವಿಕೆ.
  • ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಿಕೆ. ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ.
  • ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ.
  • ನಾಲಾ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ ಪರಿಕಲ್ಪನೆಯ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯ ಅಭಿವೃದ್ಧಿ
  • ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶ. ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಆರ್‌ಎಫ್‌ಪಿ ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿದೆ.
  • ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಲಾಗಿದೆ
  • ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ BBMP. BMRCL, BWSSB, BDA ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ಸ್ಥಾಪನೆ.
  • 1,334 ಹೊಸ ಎಲೆಕ್ಟ್ರಿಕ್ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆ.
  • ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ Vehicle Tracking ಹೊಂದಿರುವ ಮೊಬೈಲ್ ಆಪ್ ಅನುಷ್ಠಾನ
  • ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಯೋಜನೆಯನ್ನು 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್ ಸಿಗ್ನಲ್‌ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸುವಿಕೆ
  • ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪಡೆಯಿಂದ 5.550 ಕೋಟಿ ರೂ. ಅಂದಾಜು ರೂ ವೆಚ್ಚದಲ್ಲಿ 775 ಎಂಎಲ್‌ಡಿ ಸಾಮರ್ಥ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024 ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರು ಒದಗಿಸುವಿಕೆ.
  • ಕಾವೇರಿ 2ನೇಹಂತ- ಯೋಜನೆಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಆಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮರ್ಥ್ಯ ಸೃಜಿಸುವಿಕೆ.
  • ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ.
ವಾಣಿಜ್ಯ ಮತ್ತು ಕೈಗಾರಿಕೆ 

ಬೆಂಗಳೂರು ಸಮೀಪ 40 ಸಾವಿರ ಕೋಟಿ ಹೂಡಿಕೆ, 80 ಸಾವಿರ ಉದ್ಯೋಗ ಸೃಷ್ಟಿ  

  • 2023-24ನೇ ಸಾಲಿನಲ್ಲಿ ಸುಮಾರು 88,150 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸಿದೆ. Electronic System Design and Manufacturing (ESDM), ಚಾಲಿತ ವಾಹನಗಳಿಗೆ ಲಿಥಿಯಂ ಅಯಾನ್ ಬ್ಯಾಟರಿ ತಯಾರಿಕೆ, ತಯಾರಿಕಾ ವಲಯ, ಆಟೊಮೊಬೈಲ್, ಡೇಟಾ ಸೆಂಟರ್ ಮತ್ತಿತರ ವಲಯಗಳಲ್ಲಿ ಈ ಹೂಡಿಕೆಗಳನ್ನು ಮಾಡಲಾಗುತ್ತಿದೆ.
  • ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅಭಿವೃದ್ಧಿಪಡಿಸಲು ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ.
  • ಕೈಗಾರಿಕಾ ಅಭಿವೃದ್ಧಿಯಲ್ಲಿ ಕರ್ನಾಟಕದ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು.
  • ರಾಜ್ಯಕ್ಕೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಫೆಬ್ರವರಿ 2025ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ (Global Investor’s Meet) ಆಯೋಜನೆ
  • ಗ್ರಾಮೀಣ ಜನರಲ್ಲಿ ಆರ್ಥಿಕ ಶಿಸ್ತು ಮತ್ತು ಉಳಿತಾಯ ಮನೋಭಾವವನ್ನು ಉತ್ತೇಜಿಸಲು ಎಂ.ಎಸ್.ಐ.ಎಲ್. ವತಿಯಿಂದ ಚಿಟ್‌ಫಂಡ್‌ ಅನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಣೆ
  • ಯಶವಂತಪುರದಲ್ಲಿ ಕೆ.ಎಸ್.ಡಿ.ಎಲ್ ವತಿಯಿಂದ ಜಮೀನಿನಲ್ಲಿ ವಿವಿಧ ಸರ್ಕಾರಿ ಇಲಾಖೆಗಳನ್ನು ನಿರ್ವಹಿಸಲು ಸುಸಜ್ಜಿತ ಕಚೇರಿ ಸಂಕೀರ್ಣ ನಿರ್ಮಾಣ.
  • ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ನಿಗಮದ (KSSIDC) ಮೂಲಕ ಮೇಲ್ದರ್ಜೆಗೇರಿಸುವಿಕೆ.
  • ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಐಪಿಸಿ ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂಪಾಯಿಗಳಿಗೆ ಒಳಪಟ್ಟು ಶೇ.50 ರಷ್ಟು ಸಹಾಯಧನ
  • ಸರ್ಕಾರಿ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು ಮತ್ತು ಎಂ.ಎಸ್.ಎಂ.ಇ.ಗಳನ್ನು TReDS ವೇದಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಎಂಎಸ್‌ಎಂಇಗಳಿಗೆ ಬರಬೇಕಾದ ಪಾವತಿಗಳು ಕಾಲಮಿತಿಯೊಳಗೆ ಸ್ವೀಕೃತಿಯಾಗಿ ಅವುಗಳ ನಗದು ಹರಿವು ಸಧೃಡಗೊಳಿಸಬೇಕು ಎಂಬ ಉದ್ದೇಶದಿಂದ TReDS ಸೇವಾ ಪೂರೈಕೆದಾರರೊಂದಿಗೆ ಒಡಂಬಡಿಕೆ
  • ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷ ಘಟಕ ಯೋಜನೆಯಡಿ ಕರ್ನಾಟಕ ಚರ್ಮ ಮತ್ತು ಫ್ಯಾಷನ್ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಎಲ್‌) ಡಿಪ್ಲೊಮಾ ಇನ್ ಲೆದರ್ ಅಂಡ್ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಮಾಡಲು ಪ್ರೋತ್ಸಾಹಧನ
  • ಸಾರ್ವಜನಿಕ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಬೆಲೆಯಲ್ಲಿ ಮರಳು ಲಭ್ಯಪಡಿಸಲು ಹೊಸ ಮರಳು ನೀತಿ 2020 ಅನ್ನು ಅನುಮೋದಿಸಲಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಈ ನೀತಿಯನ್ನು ಜಾರಿಗೊಳಿಸುವಲ್ಲಿನ ಗೊಂದಲಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಸುಲಭವಾಗಿ ಹಾಗೂ ಯೋಗ್ಯ ದರದಲ್ಲಿ ಮರಳನ್ನು ಒದಗಿಸುವಿಕೆ.
  • ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭ. ಇದರಿಂದ ಸುಮಾರು 10,000 ಉದ್ಯೋಗ ಸೃಷ್ಟಿ.
  • ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪಾರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ
  • ಜವಳಿ ಪಾರ್ಕ್‌ಗಳು ಇಲ್ಲದಿರುವ ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸುವ ಉದ್ದಿಮೆದಾರರಿಗೆ ಮೂಲಸೌಕರ್ಯಕ್ಕಾಗಿ ಜವಳಿ ನೀತಿಯನ್ವಯ ಸಹಾಯಧನ.
  • ಮಹಾತ್ಮಾ ಗಾಂಧೀಜಿಯವರು ಭೇಟಿ ನೀಡಿದ್ದ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕಾಗಿ ಕ್ರಮ.
ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ

ರಾಜ್ಯದ ವಿವಿಧ ನಗರಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳ ಸ್ಥಾಪನೆ 

  • ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಇನ್ನೋವೇಶನ್ ಸ್ಟಾರ್ಟ್‌ಅಪ್‌ಗಳನ್ನು ಸ್ಥಾಪಿಸಲು ಸಿ-ಕ್ಯಾಂಪ್‌ನ ಆಗಿ ಇನ್ನೋವೇಶನ್ ಪಾರ್ಕ್‌ಗೆ 5 ಎಕರೆ ಭೂಮಿ ಮೀಸಲು.
  • ಉದಯೋನ್ಮುಖ ತಂತ್ರಜ್ಞಾನಗಳಿಗೆ ಉತ್ತೇಜನ ನೀಡಲು ಫಿನ್‌ಟೆಕ್, ಸ್ಪೇಸ್‌ಟೆಕ್ ಮತ್ತು ಆಟೋಮೋಟಿವ್ ಟೆಕ್‌ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಉದ್ಯಮಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸಹಯೋಗದೊಂದಿಗೆ ಸ್ಥಾಪನೆ
  • ಬೆಂಗಳೂರಿನಾಚೆಗೂ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್ ಸಹಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳ ಸ್ಥಾಪನೆ.
  • ರಾಜ್ಯದಲ್ಲಿ ಜಿನೋಮಿಕ್ಸ್‌ನಲ್ಲಿ ಅಧ್ಯಯನ ಮತ್ತು ಸಂಶೋಧನೆಯನ್ನು ಉತ್ತೇಜಿಸಲು ಸುಧಾರಿತ ಜಿನೋಮ್ ಎಡಿಟಿಂಗ್ ಮತ್ತು ಜೀನ್ ಥೆರಪಿ ಕೇಂದ್ರ ಸ್ಥಾಪನೆ. ಈ ಸಂಸ್ಥೆಯು ಆರೋಗ್ಯ, ಕೃಷಿ ಮತ್ತು ಜೀವ ವಿಜ್ಞಾನದ ಇತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆಗೆ ಉತ್ತೇಜನ ನೀಡಲಿದೆ.
  • ರಾಜ್ಯದಲ್ಲಿ AVGC-XR ಕಂಪನಿಗಳ ಬೆಳವಣಿಗೆಯನ್ನು ಪೋಷಿಸುವ ಮತ್ತು 30,000 ಹೊಸ ಉದ್ಯೋಗ ಸೃಜನೆಯ ಗುರಿಯೊಂದಿಗೆ AVGC-XR 3.0 ನೀತಿಯನ್ನು 2024-295 ಅವಧಿಗೆ 150 ಕೋಟಿ ರೂ. ಬದ್ಧತಾ ವೆಚ್ಚದೊಂದಿಗೆ ಜಾರಿ.
  • ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ /ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು. 170 ಕೋಟಿ ರೂ.ಗಳ ಮೀಸಲು.
  • ವಿದ್ಯಾರ್ಥಿಗಳಿಗೆ ರಾತ್ರಿ ಆಕಾಶ ವೀಕ್ಷಣೆ ಮತ್ತು ಆಕಾಶ ಕಾಯಗಳ ಕುರಿತು ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಬರುವ ಒಟ್ಟು 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಲಾ ಒಂದು ದೂರದರ್ಶಕವನ್ನು ಒಟ್ಟಾರೆ 3 ಕೋಟಿ ರೂ. ವೆಚ್ಚದಲ್ಲಿ ಒದಗಿಸುವಿಕೆ.
  • ಬೆಂಗಳೂರು ಇಂಡಿಯಾ ನ್ಯಾನೋ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ. ಸಮ್ಮೇಳನದ ಪೂರ್ವಭಾವಿಯಾಗಿ ಜನಸಮುದಾಯದಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉದ್ದೇಶದೊಂದಿಗೆ, ಒಂದು ತಿಂಗಳ ಕಾಲ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವ ಆಯೋಜನೆ.
  • ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಒಟ್ಟು 233 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ (Science City) ನಗರಿ ಸ್ಥಾಪನೆ

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!