Thursday, November 19, 2026

ಪ್ರಾಯೋಗಿಕ ಆವೃತ್ತಿ

ಪ್ರಗತಿಪರ ಚಿಂತಕ ಸಿದ್ದನಗೌಡ ಪಾಟೀಲರಿಗೆ ಎಚ್.ಎಲ್.ಕೇಶವಮೂರ್ತಿ ಪ್ರಶಸ್ತಿ

2024 ನೇ ಸಾಲಿನ ಎಚ್. ಎಲ್.ಕೇಶವಮೂರ್ತಿ ವೈಚಾರಿಕ ಪ್ರಶಸ್ತಿಗೆ ಲೇಖಕ, ಪ್ರಗತಿಪರ ಚಿಂತಕ ಸಿದ್ದನಗೌಡ ಪಾಟೀಲರನ್ನು ಆಯ್ಕೆ ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರ,ಲೇಖಕರೂ ಆದ ಸಿದ್ದನಗೌಡ ಪಾಟೀಲರ ಸಾಮಾಜಿಕ ಕಳಕಳಿ,ಹೋರಾಟ ಗುರುತಿಸಿ ಅವರನ್ನು‌ ಹಿರಿಯ ಸಾಹಿತಿ ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನ ಪ್ರಶಸ್ತಿ ನೀಡುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು 4ನೇ ಜನವರಿ, 2025ರ ಶನಿವಾರ ಬೆಳಿಗ್ಗೆ 10.30 ಕ್ಕೆ ಮಂಡ್ಯದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ. ಶಂಕರಗೌಡ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ