Tuesday, September 17, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಎಸ್ ಮುತ್ತಿಗೆಗೆ ಯತ್ನಿಸಿದ ಕನ್ನಡಪರ ಹೋರಾಟಗಾರರ ಬಂಧನ

ರಾಜ್ಯದ ರೈತರಿಗೆ ದ್ರೋಹ ಮಾಡಿ, ತಮಿಳುನಾಡಿಗೆ ನೀರು ಕೊಡಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್.ಎಸ್ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರರನ್ನು ಶನಿವಾರ ಪೊಲೀಸರು ಬಂಧಿಸಿದರು.

ಕೆ.ಆರ್.ಎಸ್ ಮುಖ್ಯದ್ವಾರದಲ್ಲಿ ಪ್ರತಿಭಟಿಸಿದ ಪ್ರತಿಭಟನಕಾರರು ನಂತರ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರ ನಡುವೆ ಮಾತಿನ ಚಕಮಕಿ ನಡೆಯಿತು. ಅನಂತರ ಹೋರಾಟಗಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.

ಬೆಂಗಳೂರಿನಿಂದ ಆಗಮಿಸಿದ್ದ ಕನ್ನಡ ಪರ ಸಂಘಟನೆಗಳ ಮುಖಂಡರು ಈ ಮೊದಲು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!