Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಬೆಂಗಳೂರು ನೀರು ಸರಬರಾಜು ಮಂಡಳಿಗೆ ಮುತ್ತಿಗೆ: ಹಲವರ ಬಂಧನ

ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ತೊರೆಕಾಡನಹಳ್ಳಿಯ ಬಿ.ಡಬ್ಲ್ಯು.ಎಸ್.ಎಸ್.ಬಿ ಮುಖ್ಯದ್ವಾರದ ಬಳಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿಗೆ ನೀರು ಬಳಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಬೆಂಗಳೂರು ಜಲ ಮಂಡಳಿಯ ಪಂಪ್ ಹೌಸ್ ಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ಜರುಗಿತು.

ಟಿ.ಕೆ.ಹಳ್ಳಿಯ ಬೆಂಗಳೂರು ಜಲ ಮಂಡಳಿ ಮುಖ್ಯ ಗೇಟ್ ಬಳಿ ಸಂಪೂರ್ಣವಾಗಿ ನೀರು ನಿಲ್ಲಿಸುವಂತೆ ಹಾಗೂ ರೈತರ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ಬಳಿಕ ಬೆಂಗಳೂರು ಕಾವೇರಿ ನೀರು ಸರಬರಾಜು ಮಾಡುವ ಪಂಪ್ ಹೌಸ್ ಒಳಗೆ ನುಗ್ಗಲು ಗೇಟ್ ತಳ್ಳಿ ಒಳಗೆ ಪ್ರವೇಶ ಮಾಡಲು ಮುಂದಾಗುತ್ತಿದ್ದಂತೆ ಪ್ರತಿ ಭಟನಕಾರರನ್ನು ಪೊಲೀಸರು ಬಂಧಿಸಿದರು.

ಇಂದು ಬೆಂಗಳೂರು ಜಲ ಮಂಡಳಿಯ ಮುಖ್ಯ ದ್ವಾರ ಬಳಿ ವಿವಿಧ ಕನ್ನಡ ಪರ ಸಂಘಟನೆಗಳು ತಮಿಳು ನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಮಂಡ್ಯ , ಮೈಸೂರು, ಚಾಮರಾಜ ನಗರ ಜಿಲ್ಲೆಗಳಲ್ಲಿ ಪ್ರತಿಭಟನೆ ಸದ್ದು ಕಾವೇರಿದೆ ಆದರೆ ಕಾವೇರಿಯ ನೀರು ಬಹುತೇಕ ಕುಡಿಯುವ ನೀರು ಬಳಸಿಕೊಳ್ಳುತ್ತಿರುವ ಬೆಂಗಳೂರಿನ ಜನತೆ ಇದಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದಾರೆ.

ಕಾವೇರಿ ಹೋರಾಟದಲ್ಲಿ ಬೆಂಗಳೂರು ಮಂದಿ ಭಾಗಿಯಾಗಿ ಸರ್ಕಾರಕ್ಕೆ ಒತ್ತಡ ತರಬೇಕಿತ್ತು. ಆದರೆ ಇದರ ವಿರುದ್ಧ ಇದ್ದಾರೆ,ಅವರಿಗೆ ತಮಿಳುನಾಡಿಗೆ ನೀರು ಹರಿಸುತ್ತಿದ್ದರೂ ಸಮಸ್ಯೆ ಅರ್ಥ ಮಾಡಿಕೊಳ್ಳುತ್ತಿಲ್ಲ .ನೀರು ಪೂರೈಕೆ ಸ್ಥಗಿತ ಮಾಡಿದರೆ ಬೆಂಗಳೂರು ಮಂದಿಗೆ ಬುದ್ದಿ ಕಲಿಯುತ್ತಾರೆ ಹಾಗೂ ರೈತರ ಬೆಳಗಳಿಗೆ ನೀರು ಹರಿಸಬೇಕು ಎಂದು ಕನ್ನಡ ಸಂಘನೆಗಳ ಆಗ್ರಹಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!