Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಸರಳ ಕನಕ ಜಯಂತಿ ಆಚರಣೆ

ನ. 30 ರಂದು ಭಕ್ತ ಕನಕದಾಸರ ಜಯಂತಿಯನ್ನು ಬರದ ಹಿನ್ನಡೆಯಲ್ಲಿ ಸರಳವಾಗಿ ಆಚರಿಸಲಾಗುವುದೆಂದು ಮಳವಳ್ಳಿ ತಹಶೀಲ್ದಾರ್ ಲೋಕೇಶ್ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಸರಿಯಾಗಿ ಮಳೆಯಾಗದ ಹಿನ್ನಲೆಯಲ್ಲಿ ಬರದ ಕರಿ ತೆರಳು ಅವರಿಸುತ್ತಿರುವುದರಿಂದ ಮಹಾನೀಯರ ಜಯಂತಿಯನ್ನು ಸರಳವಾಗಿ ಆಚರಿಸಬೇಕೆಂದು ನಿರ್ದೇಶನವಿದ್ದು, ತಾಲ್ಲೂಕು ಆಡಳಿತ ವತಿಯಿಂದ ಮಹಾನೀಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದೆಂದು ಹೇಳಿದರು.

ತಾಲೂಕು ಕಚೇರಿ ಅರ್ಥಪೂರ್ಣವಾಗಿ ಆಚರಿಸುವ ಕನಕ ಜಯಂತಿ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಭಾಗವಹಿಸಿ ಯಶಸ್ವಿಗೊಳಿಸಿ ಕೊಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರ ಪಾಟೀಲ್, ಪುರಸಭೆ ಮುಖ್ಯ ಅಧಿಕಾರಿ ನಾಗರತ್ನ, ಪಶು ಸಂಗೋಪನೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಪಂ ಮಾಜಿ ಅಧ್ಯಕ್ಷ ಚಿಕ್ಕಲಿಂಗಯ್ಯ, ನಾಗರಾಜು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!