Saturday, November 21, 2026

ಪ್ರಾಯೋಗಿಕ ಆವೃತ್ತಿ

ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ, ವಿದೇಶಿ ಮದ್ಯ ಪತ್ತೆ

ಸಿನಿಮಾ ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಸಮಾರಂಭದ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್‌ನ ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‌ನಲ್ಲಿ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ.

ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್‌ ಟೆಸ್ಟ್‌ನಲ್ಲಿ ಹಲವರು ಮಾದಕ ವಸ್ತು ಸೇವಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“>

 

ದಾಳಿ ವೇಳೆ ಪೊಲೀಸರು ವಿಡಿಯೋ ಮಾಡಿದ್ದು ಮಂಗ್ಲಿ ವಿಡಿಯೋ ಮಾಡೋದು ನಿಲ್ಲಿಸಿ ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

“ಚವೆಲ್ಲಾ ಪೊಲೀಸರು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿದ್ದರೆಸಾರ್ಟ್ ಮೇಲೆ ದಾಳಿ ನಡೆಸಿದರು. ನಾವು ಕಾನೂನುಗಳನ್ನು ಪಾಲಿಸದಿದ್ದರೆ, ನಾವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಅವರು ಎಷ್ಟೇ ಪ್ರಸಿದ್ಧರಾಗಿದ್ದರೂ, ಮಾದಕ ದ್ರವ್ಯ ಸೇವಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುತ್ತಾರೆ” ಎಂದು ತೆಲಂಗಾಣ ಪೊಲೀಸ್ ಇಲಾಖೆ ಟ್ವಿಟ್ ಮಾಡಿದೆ.

ದಾಳಿಯ ಸಮಯದಲ್ಲಿ ರೆಸಾರ್ಟ್‌ನಲ್ಲಿ ಮಂಗ್ಲಿಯ 50 ಆಪ್ತ ಸ್ನೇಹಿತರು ಇದ್ದರು. ಪೊಲೀಸರು ಒಟ್ಟು 48 ಜನರನ್ನು ಮಾದಕ ದ್ರವ್ಯ ಪರೀಕ್ಷೆಗೆ ಒಳಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ