Sunday, November 22, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ಸಿಂಗ್ರೀಗೌಡನಕೊಪ್ಪಲು ಡೇರಿಗೆ ರೈತಸಂಘ-ಕಾಂಗ್ರೆಸ್ ಬೆಂಬಲಿತರ ಆಯ್ಕೆ

ಪಾಂಡವಪುರ ತಾಲೂಕಿನ ಸಿಂಗ್ರೀಗೌಡನಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕ್ರಮವಾಗಿ ರೈತಸಂಘ-ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳಾದ ಸಿಂಗ್ರೀಗೌಡ ಹಾಗೂ ಜಯಶೀಲ ಅವಿರೋಧವಾಗಿ ಆಯ್ಕೆಯಾದರು.

ಸಂಘದಲ್ಲಿ ಒಟ್ಟು‌ 10 ಮಂದಿ ನಿರ್ದೇಶಕರು ಇದ್ದಾರೆ. ಎಲ್ಲರೂ ರೈತಸಂಘ-ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳಾಗಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ರೈತಸಂಘ-ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳಾದ ಸಿಂಗ್ರೀಗೌಡ ಹಾಗೂ ಜಯಶೀಲ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ವಸೀಂಪಾಷ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು. ಬಳಿಕ ಕಾರ್ಯಕರ್ತರು ಸಿಹಿ ವಿತರಿಸಿ ಸಂಭ್ರಮಿಸಿದರು.

ಈ ವೇಳೆ ಡೇರಿ ಮಾಜಿ ಅಧ್ಯಕ್ಷ ನರಸೇಗೌಡ ಮತ್ತು ಯುವ ಮುಖಂಡ ಅಜಯ್ ಮಾತನಾಡಿ, ಡೇರಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಸಿಂಗ್ರಿಗೌಡ ಮತ್ತು ಜಯಶೀಲ ಅವರನ್ನು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇವರು ಎಲ್ಲಾ ನಿರ್ದೇಶಕರ ಮಾರ್ಗದರ್ಶನ ಪಡೆದುಕೊಂಡು ಡೇರಿ ಉನ್ನತೀಕರಣಕ್ಕೆ ಮುಂದಾಗಬೇಕು ಎಂದರು.

ಈ ವೇಳೆ ಡೇರಿ ನಿರ್ದೇಶಕರಾದ ಪಾಪಣ್ಣ, ರಮೇಶ್, ಮಂಜುಳಾ, ದೇವಿರಮ್ಮ, ಭಾಗ್ಯಮ್ಮ, ಯಶೋಧಮ್ಮ, ಕನ್ಯಾಕುಮಾರಿ, ಸುಮಿತ್ರಾ, ಕಾರ್ಯದರ್ಶಿ ಕೃಷ್ಣೇಗೌಡ (ಬಾಬು), ಯಜಮಾನರಾದ ಸಣ್ಣೇಗೌಡ, ಸಿಂಗ್ರಿಗೌಡ, ಬಿ.ಎಸ್.ನರಸೇಗೌಡ, ಪುಟ್ಟಸ್ವಾಮಿಗೌಡ, ಪಾಪೇಗೌಡ, ಚಿಕ್ಕಣ್ಣ, ಪಟೇಲ್ ಕೃಷ್ಣೇಗೌಡ, ಮಾಣಿಕ್ಯನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಎಸ್.ಕುಮಾರ್, ಮಾಜಿ ಸದಸ್ಯೆ ಅರ್ಪಿತಾ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ನಟರಾಜು,ಎಂ.ಶೆಟ್ಟಹಳ್ಳಿ ಡೇರಿ ಅಧ್ಯಕ್ಷ ಸುರೇಶ್, ಮುಖಂಡರಾದ ಬಿ.ಕೆ.ಯೋಗೇಶ್, ಮಹಾಂತೇಶ್, ಭಾಸ್ಕರ್, ಪುಟ್ಟೇಗೌಡ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ