Tuesday, November 24, 2026

ಪ್ರಾಯೋಗಿಕ ಆವೃತ್ತಿ

ಎಸ್‌ಐಆರ್ | ಕರ್ನಾಟಕದಲ್ಲಿ ಏನು ಮಾಡಬೇಕಿದೆ? ಮಾ.14 ಕ್ಕೆ ವಿಚಾರ ಸಂಕಿರಣ

ಜಾಗೃತ ಕರ್ನಾಟಕ ಮತ್ತು ಭಾರತ್ ಜೋಡೋ ಅಭಿಯಾನ ಸಂಯೋಜಿತವಾಗಿ ಮಾರ್ಚ್ 14ರಂದು ಬೆಳಿಗ್ಗೆ 10.30ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಎಸ್‌ಐಆರ್‌: ‘13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ?’ ಎಂಬ ವಿಷಯದ ಮೇಲೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾರತ್ ಜೋಡೋ ಅಭಿಯಾನದ ರಾಷ್ಟ್ರೀಯ ಸಂಚಾಲಕ ಪ್ರೊ. ಯೋಗೇಂದ್ರ ಯಾದವ್ ಅವರು ದಿಕ್ಸೂಚಿ ಭಾಷಣ ನೀಡಲಿದ್ದಾರೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಪ್ರತಿನಿಧಿಗಳು ತಮ್ಮ ರಾಜ್ಯಗಳ ಅನುಭವಗಳನ್ನು ಮಂಡಿಸಲಿದ್ದಾರೆ.

ಈ ಸಂಕಿರಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿನಿಧಿಗಳು ಭಾಗವಹಿಸುವರು. 13 ರಾಜ್ಯಗಳಲ್ಲಿ ಜನಾಂದೋಲನದ ಪ್ರಗತಿ ಮತ್ತು ಕರ್ನಾಟಕದಲ್ಲಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ವಿವರವಾದ ಚರ್ಚೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ 831094773 ಸಂಖ್ಯೆಯನ್ನು ಸಂಪರ್ಕಿಸಬಹುದು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ