Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ವಸತಿ ರಹಿತರಿಗೆ ಶೀಘ್ರದಲ್ಲೇ ನಿವೇಶನ ಹಂಚಿಕೆ : ನರೇಂದ್ರಸ್ವಾಮಿ

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿರುವ 33 ಎಕರೆಯಲ್ಲಿ ನಿವೇಶನದಲ್ಲಿ ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ನೀಡುವುದಾಗಿ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮತ್ತು ಆಶ್ರಯ ಸಮಿತಿ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಆಶ್ರಯ ಸಮಿತಿ ಕಮಿಟಿ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದವರು.

ಹಿಂದಿನ ಕಾಲದಲ್ಲಿ ನಾನು ಶಾಸಕನಾಗಿದ್ದಾಗ ಅರ್ಜಿ ಆಹ್ವಾನಿಸಿತ್ತು ಈಗ ವಿಮರ್ಶಾತ್ಮಕವಾಗಿ ಅಂತಿಮ ಪಟ್ಟಿ ಮಾಡಿದ್ದು ಇನ್ನು ಉಳಿದ ನಿವೇಶನ ಹಂಚಿಕೆಗಳಿಗೆ ತುರ್ತಾಗಿ ಅರ್ಜಿ ಆಹ್ವಾನಿಸಿದ್ದು ಮುಂದಿನ ದಿನಗಳಲ್ಲಿ ಹಕ್ಕುಪತ್ರವನ್ನು ಶೀಘ್ರವಾಗಿ ಹಂಚಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಕ್ಕುಪತ್ರ ವಿತರಣೆ ಮಾಡಿ ಮತ್ತು ಪೂ ರಿಗಾಲಿ ನೀರಾವರಿ ಯೋಜನೆ ಉದ್ಘಾಟನೆ ಹಾಗೂ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಒಳಗೊಂಡಂತೆ ಇನ್ನಿತರ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವುದನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆನೆ ಎಂದರು.

ತಾಲೂಕು ಕೆಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಹಾಗದೆ ಅರ್ಜಿಗಳು ಶೀಘ್ರವಾಗಿ ವಿಲೇವಾರಿ ಆಗಬೇಕು ಇಲ್ಲದಿದ್ದರೆ ತಹಶೀಲ್ದಾರ್ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಗ್ರಾಮಲೆಕ್ಕಿದರವರು ಗ್ರಾಮ ಪಂಚಾಯತಿಗಳಲ್ಲಿ ಕಚೇರಿ ತೆರೆದು ಸಾರ್ವಜನಿಕರಿಗೆ ಕೆಲಸಗಳನ್ನು ಮಾಡಬೇಕೆಂದರು .

ಇದೇ ವೇಳೆಯಲ್ಲಿ ಗ್ರಾಮ ಲೆಕ್ಕಗ ಅವರಿಗೆ ಲ್ಯಾಪ್ ಟ್ಯಾಪ್ ಅನ್ನು ಶಾಸಕ ಪಿಎಂ ನರೇಂದ್ರಸ್ವಾಮಿ ಯವರು ವಿತರಿಸಿದರು.

ಇದೇ ವೇಳೆಯಲ್ಲಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ. ತಹಶೀಲ್ದಾರ್ ಲೋಕೇಶ್. ಮುಖ್ಯ ಅಧಿಕಾರಿ ನಾಗರತ್ನ ಸೇರಿದಂತೆ ಇತರರು ಇದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ