Friday, November 20, 2026

ಪ್ರಾಯೋಗಿಕ ಆವೃತ್ತಿ

ಖಾದಿ ಮಾರಾಟ ಮೇಳದಲ್ಲಿ ₹1.20 ಕೋಟಿ ವಹಿವಾಟು : ಶಿವಾನಂದಮೂರ್ತಿ

ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಖಾದಿ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ₹1.20 ಕೋಟಿ ವಹಿವಾಟು ನಡೆದಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವನಂದಮೂರ್ತಿ ತಿಳಿಸಿದರು.

ಕರ್ನಾಟಕ ರಾಜ್ಯ ಗ್ರಾಮೋದ್ಯೋಗ ಮಂಡಳಿ ಹಾಗೂ ವಾಣಿಜ್ಯ ಕೈಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಖಾದಿ ಉತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಖಾದಿಯನ್ನು ಇನ್ನಷ್ಟು ಜನಪ್ರಿಯ ಮಾಡಬೇಕಾದ ಅವಶ್ಯಕತೆ ಇದೆ, ಹಾಗಾಗಿ ಹೆಚ್ಚು ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳಾದ ಎಚ್. ಕೆ ಸುಧಾಮ ಮತ್ತು ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ