Thursday, November 19, 2026

ಪ್ರಾಯೋಗಿಕ ಆವೃತ್ತಿ

ಎಸ್.ಎಂ.ಕೃಷ್ಣಗೆ ನಾಗರೀಕ ಸನ್ಮಾನ: ಪೂರ್ವಭಾವಿ ಸಭೆ

ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ಧಿಗಳಾದ ಮಂಡ್ಯ ಜಿಲ್ಲೆಯ ಎಸ್.ಎಂ.ಕೃಷ್ಣ ಅವರಿಗೆ ತವರಿನ ನಾಗರೀಕ ಸನ್ಮಾನ ಮಾಡಲು ತೀರ್ಮಾನಿಸಿದ್ದು, ಈ ಸಂಬಂಧ ಇದೇ ಫೆ.7 ರ ಮಂಗಳವಾರ ಸಂಜೆ ೪ಗಂಟೆಗೆ ಕರ್ನಾಟಕ ಸಂಘದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತ ಸರ್ಕಾರದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಗೆ ಭಜನರಾಗಿರುವ ಎಸ್.ಎಂ.ಕೃಷ್ಣ ಅವರ ಸಾಧನೆ ಮಂಡ್ಯ ಜಿಲ್ಲೆಗೆ ಹೆಮ್ಮೆ ಪಡುವ ಸಂಗತಿಯಾಗಿದ್ದು, 91 ವರ್ಷ ವಯೋಮಾನದ ಕೃಷ್ಣ ಅವರಿಗೆ ಮಂಡ್ಯ ಜಿಲ್ಲೆಯ ನಾಗರೀಕರ ಪರವಾಗಿ ಸನ್ಮಾನಿಸುವುದು ನಮ್ಮ ಕರ್ತವ್ಯವಾಗಿದ್ದು, ಪಕ್ಷಾತೀತವಾಗಿ ಅಂದು ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು, ಸಭೆಗೆ ಎಲ್ಲಾ ಪಕ್ಷಗಳ ಮುಖಂಡರು, ಪ್ರಗತಿಪರರು, ಇನ್ನಿತರ ಕ್ಷೇತ್ರದ ಮಹನೀಯರು ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ