Monday, November 23, 2026

ಪ್ರಾಯೋಗಿಕ ಆವೃತ್ತಿ

ನಕಲಿ ದಾಖಲೆ ಸೃಷ್ಠಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ

ಅಧಿಕಾರಿಯೊಬ್ಬರ ಮೇಲೆ ನಕಲಿ ದಾಖಲೆ ಸೃಷ್ಠಿಸಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರನ್ನು  ಬೆಂಗಳೂರಿನ ಸಿಸಿಬಿ ಪೊಲೀಸರು  ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಬೆಂ

ಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಬಂಧಿಸಲಾಗಿದೆ. ಸ್ನೇಹಮಯಿ ಕೃಷ್ಣ ಇತ್ತೀಚೆಗೆ ಮುಡಾದ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು.  ತಮ್ಮ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಡಿ.ಬಿ.ನಟೇಶ್, ಸ್ನೇಹಮಯಿ ಕೃಷ್ಣ ವಿರುದ್ಧ ಸಿಸಿಬಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಐಟಿ ಕಾಯಿದೆಯ ಸೆಕ್ಷನ್ 66ಎ , ಬಿಎನ್‌ಎಸ್‌ ಸೆಕ್ಷನ್ 337, 336 ಹಾಗೂ 340 ರಡಿ ಕೇಸ್ ದಾಖಲಾಗಿದ್ದು, ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಕೇಸ್ ವೊಂದರ ವಿಚಾರಣೆಗೆ ಬಂದ ವೇಳೆ ಸ್ನೇಹಮಯಿ ಕೃಷ್ಣರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.

ಮೈಸೂರಿನಲ್ಲಿ ಶೋಧ

ಅತ್ತ ಮೈಸೂರಿನಲ್ಲಿರುವ ಎರಡು ಮನೆಗಳನ್ನು ಸರ್ಚ್ ವಾರಂಟ್ ಪಡೆದು ಶೋಧ ನಡೆಸಲಾಗುತ್ತಿದೆ. ಜೊತೆಗೆ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣರನ್ನು ವಿಚಾರಣೆ ಮಾಡಲಾಗುತ್ತಿದೆ.  ಡಿ.ಬಿ.ನಟೇಶ್ , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ಲಂಚ ನೀಡಿರುವ ಆರೋಪ ಮಾಡಿರುವ ಬಗ್ಗೆ ವಿಚಾರಣೆ ಮಾಡುತ್ತಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ