ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರ ವಿರುದ್ಧ ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ದೂರು ನೀಡಿದ್ದರು. ಇದಾದ ಬೆನ್ನಲ್ಲೇ ಬಂಧನದ ಭೀತಿಯಲ್ಲಿ ಸ್ನೇಹಮಯಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ ಎಂದು ಈದಿನ.ಕಾಮ್ ವರದಿ ಹೇಳಿದೆ.
ಚಾಮುಂಡಿ ಬೆಟ್ಟದಲ್ಲಿ ದೇವತೆಗೆ ಹರಕೆಯಾಗಿ ಬಂದ ಸೀರೆಯನ್ನು ಕದ್ದು ಲಕ್ಷಾಂತರ ರೂಪಾಯಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಕೃಷ್ಣ ಅವರು ಇತ್ತಿಚೆಗೆ ಆರೋಪಿಸಿದ್ದರು. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಅವರು ಕೆ.ಆರ್. ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆದರೆ, ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಆರೋಪ ಮಾಡಿ ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಅವರು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ
ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಅವರಿಗೆ ಬಂಧನದ ಭೀತಿ ಹೆಚ್ಚಾಗಿದ್ದು ಇದರಿಂದಾಗಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗುತ್ತಿದ್ದು, ಮೊಬೈಲ್ ಫೋನ್ ಕೂಡಾ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.




