ಮಂಡ್ಯ ಜಿಲ್ಲೆಯಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯಗಳು ಪ್ರಗತಿಯಲ್ಲಿದ್ದು, ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೋಮವಾರ ಶ್ರೀರಂಗಪಟ್ಟಣ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಂಟ್ರೋಲ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಂಟ್ರೋಲ್ ರೂಂಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕಡಿಮೆ ಸಾಧನೆ ಮಾಡಿರುವ ಗಣತಿದಾರರ ಮಾಹಿತಿ ಪಡೆದು ಅವರಿಗೆ ಕೆಲಸ ಚುರುಕುಗೊಳಿಸುವಂತೆ ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಪ್ರತಿದಿನ ಗಣತಿದಾರರ ಕೆಲಸದ ಪ್ರಗತಿಯನ್ನು ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ತೊಂದರೆ ಉಂಟಾದರೆ ಪರಿಹರಿಸಿ ಕೆಲಸ ನಿರಂತರವಾಗಿ ನಡೆಸಿ ನಿಗದಿತ ದಿನದೊಳಗೆ ಸಮೀಕ್ಷೆ ಪೂರ್ಣಗೊಳಿಸುವ ರೀತಿ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ನೋಡಲ್ ಅಧಿಕಾರಿ ಮಧುಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




